ನವದೆಹಲಿ: ಇದೇ ಮೊದಲ ಬಾರಿಗೆ ದೇಶದಲ್ಲಿ 13 ಪ್ರಾದೇಶಿಕ ಭಾಷೆಗಳಲ್ಲಿ ನೀಟ್ ಪರೀಕ್ಷೆ ನಡೆಸಲು ಅನುಮತಿ ನೀಡಲಾಗಿದೆ.
ಈ ಸಂಬಂಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಾತನಾಡಿದ್ದು, ಈ ಬಾರಿಯ ನೀಟ್ ಪರೀಕ್ಷೆಯನ್ನು ಕನ್ನಡ, ಮಲಯಾಳಂ, ಪಂಜಾಬ್ ಭಾಷೆಗಳನ್ನು ಒಳಗೊಂಡಂತೆ ಸುಮಾರು 13 ಭಾರತೀಯ ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಹಾಗೆಯೇ ಕುವೈಟ್ನಲ್ಲಿರುವ ಭಾರತೀಯ ಸಮುದಾಯದ ವಿದ್ಯಾರ್ಥಿಗಳಿಗೆ ನೀಟ್ ಯುಜಿ ಪರೀಕ್ಷೆ ಬರೆಯಲು ಅನುಕೂಲ ಕಲ್ಪಿಸುವ ಉದ್ದೇಶದಿಂದ ಕೇಂದ್ರ ತೆರೆಯಲಾಗಿದೆ ಎಂದು ಅವರು ಹೇಳಿದ್ದಾರೆ.
ಇತಿಹಾಸದಲ್ಲೇ ಮೊದಲ ಬಾರಿಗೆ ಎಂಬಂತೆ ಕುವೈಟ್, ಮಧ್ಯಪ್ರಾಚ್ಯಗಳಲ್ಲಿನ ಭಾರತೀಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಈಗಾಗಲೇ ಸೆ. 12 ರಂದು ಪರೀಕ್ಷೆ ನಡೆಯುವ ಬಗ್ಗೆ ಕೇಂದ್ರ ಸರ್ಕಾರ ದಿನಾಂಕ ನಿಗದಿ ಮಾಡಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸಹ ಆರಂಭವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.