ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಅರ್ನಿಯಾ ಸೆಕ್ಟರ್ ಬಳಿ ಮಂಗಳವಾರ ತಡರಾತ್ರಿ ಡ್ರೋಣ್ ಪತ್ತೆಯಾಗಿದ್ದು, ಬಿಎಸ್ಎಫ್ ಯೋಧರು ಡ್ರೋಣ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಭಾರತದ ಗಡಿಯ 200 ಮೀ. ಒಳಗೆ ಈ ಡ್ರೋಣ್ ಪ್ರವೇಶಿಸಿರುವುದನ್ನು ಗಮನಿಸಿದ ಯೋಧರು ತಕ್ಷಣ ಅದರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಆ ಸಂದರ್ಭದಲ್ಲಿ ಡ್ರೋಣ್ ಹಿಮ್ಮುಖವಾಗಿ ಚಲಿಸಿದ್ದು, ಬಳಿಕ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯ ನಡೆಸಿವೆ. ಆ ಬಳಿಕ ಯಾವುದೇ ಡ್ರೋಣ್ ಪತ್ತೆಯಾಗಿಲ್ಲ ಎಂದು ಬಿಎಸ್ಎಫ್ ಯೋಧರು ಸ್ಪಷ್ಟಪಡಿಸಿದ್ದಾರೆ.
ಕಳೆದ ಜೂನ್ ತಿಂಗಳಲ್ಲಿ ಜಮ್ಮುವಿನ ವಾಯುನೆಲೆ ಬಳಿ ಉಗ್ರರು ಡ್ರೋಣ್ ದಾಳಿ ನಡೆಸಿದ್ದರು. ಈ ದಾಳಿಗೆ ಪಾಕಿಸ್ಥಾನದ ಕೈವಾಡ ಇರುವ ಶಂಕೆಯೂ ವ್ಯಕ್ತವಾಗಿತ್ತು. ಆ ಬಳಿಕ ಹಲವು ಡ್ರೋಣ್ ಹಾರಾಟವೂ ಕಂಡು ಬಂದಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.