ನವದೆಹಲಿ: ಪೂರ್ವ ಲಡಾಕ್ ಭಾಗದ ಆಕ್ರಮಣಕ್ಕಾಗಿ ಭಾರತ ಅಥವಾ ಚೀನಾ ಸೇನೆಯಿಂದ ಯಾವುದೇ ರೀತಿಯ ಪ್ರಯತ್ನ ನಡೆದಿಲ್ಲ ಎಂದು ಭಾರತೀಯ ಸೇನೆ ತಿಳಿಸಿದೆ.
ಆ ಭಾಗದಲ್ಲಿ ಇನ್ನೂ ಜ್ವಲಂತವಾಗಿರುವ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ದೃಷ್ಟಿಯಿಂದ ಉಭಯ ರಾಷ್ಟ್ರಗಳ ನಡುವೆ ಮಾತುಕತೆಗಳು ಮುಂದುವರಿಯುತ್ತಿರುವುದಾಗಿ ಸೇನೆ ತಿಳಿಸಿದೆ. ಹಾಗೆಯೇ ಪೂರ್ವ ಲಡಾಕ್ ಪ್ರದೇಶದಲ್ಲಿ ಸೇನೆಯು ಪಿಎಲ್ಎ ಸೇನೆಯ ಸೈನಿಕರ ಚಲನವಲನಗಳ ಮೇಲೆ ನಿಗಾ ಇರಿಸಿದೆ ಎಂದು ಹೇಳಿದೆ.
ಪೂರ್ವ ಲಡಾಕ್ ಗಡಿಯಲ್ಲಿನ ಉಭಯ ದೇಶಗಳ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳುವುದಕ್ಕೆ ಒಪ್ಪಂದ ನಡೆದ ಬಳಿಕ, ಈ ಪ್ರದೇಶದಲ್ಲಿ ಯಾವುದೇ ರೀತಿಯ ಆಕ್ರಮಣಗಳು ನಡೆದಿಲ್ಲ. ಚೀನಾ ಜೊತೆಗಿನ ಒಪ್ಪಂದ ಮುರಿದು ಬಿದ್ದಿದೆ ಎಂದು ಮಾಧ್ಯಮಗಳು ಬಿತ್ತರಿಸಿದ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ಭಾರತೀಯ ಸೇನೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.