ಬೆಂಗಳೂರು: ಕರ್ನಾಟಕದ ಯಾವುದೇ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಒಂದು ಭಾಷೆಯನ್ನಾಗಿ ಕಲಿಸುವುದಕ್ಕೆ ಸಂಬಂಧಿಸಿದಂತೆ ಕನ್ನಡ ಕಲಿಕಾ ಅಧಿನಿಯಮ – 2015 ರ ಕಾಯ್ದೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಾವುದೇ ರಾಜಿ ಇಲ್ಲ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ರಾಜ್ಯದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಲಿಸಬೇಕು. ಈ ಸಂಬಂಧ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.
ಒಂದನೇ ತರಗತಿಯಿಂದ ಹತ್ತನೇ ತರಗತಿಯ ವರೆಗೆ ಹಂತ ಹಂತವಾಗಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಲಿಸಬೇಕಿದೆ. ಇದಕ್ಕೆ ಹೊರ ರಾಜ್ಯದ ಪೋಷಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದು ಈ ನೆಲದ ಸಂಸ್ಕೃತಿಯನ್ನು ವಿರೋಧಿಸುವ ವಿಚಾರವಾಗಿದೆ. ಈ ಯಾವುದೇ ಆಗ್ರಹ, ವಿರೋಧಗಳಿಗೂ ರಾಜ್ಯದ ಶಾಲೆಗಳು ಮಣಿಯಬೇಕಿಲ್ಲ. ಕಟ್ಟುನಿಟ್ಟಾಗಿ ಕನ್ನಡ ಕಲಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.