ವಾರಣಾಸಿ : ಉತ್ತರ ಪ್ರದೇಶದ ವಾರಣಾಸಿಯ ಹೊರವಲಯ ಸಿಗ್ರಾದಲ್ಲಿ ನಿರ್ಮಿಸಲಾದ ‘ರುದ್ರಾಕ್ಷ’ ಅಂತರರಾಷ್ಟ್ರೀಯ ಸಹಕಾರ ಮತ್ತು ಸಮಾವೇಶ ಕೇಂದ್ರವನ್ನು ಪ್ರಧಾನಿ ಮೋದಿ ಅವರು ನಾಳೆ ಉದ್ಘಾಟಿಸಲಿದ್ದಾರೆ.
ಇದನ್ನು ಜಪಾನ್ ಸರ್ಕಾರದ ಸಹಕಾರದ ಜೊತೆಗೆ ಸ್ಥಾಪಿಸಲಾಗಿದ್ದು, ಈ ಕೇಂದ್ರದಲ್ಲಿ 108 ರುದ್ರಾಕ್ಷಿಗಳನ್ನು ಸ್ಥಾಪಿಸಲಾಗಿದೆ. ಪುರಾತನ ಕಾಶಿಯ ಶ್ರೀಮಂತ ಸಾಂಸ್ಕೃತಿಕ ದೃಶ್ಯಗಳನ್ನು ಅನಾವರಣಗೊಳಿಸುವ ಈ ಕೇಂದ್ರದ ಕಟ್ಟಡದ ಸೂರು ಶಿವಲಿಂಗದ ರೂಪದಲ್ಲಿದೆ. ಸಂಪೂರ್ಣ ಕಟ್ಟಡ ರಾತ್ರಿಯ ವೇಳೆಯಲ್ಲಿ ಎಲ್ಇಡಿ ದೀಪಗಳಿಂದ ಜಗಮಗಿಸಲಿದೆ.
ಇದು ಎರಡು ಅಂತಸ್ತಿನ ಕಟ್ಟಡವಾಗಿದ್ದು, 2.87 ಹೆಕ್ಟೇರ್ ವಿಸ್ತೀರ್ಣದಲ್ಲಿದೆ. 1200 ಆಸನಗಳ ಸಾಮರ್ಥ್ಯವನ್ನು ಇದು ಹೊಂದಿದೆ. ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿ ಈ ಯೋಜನೆಯ ಉದ್ದೇಶವಾಗಿದೆ.
ಈ ಅಂತರರಾಷ್ಟ್ರೀಯ ಸಮಾವೇಶ ಕೇಂದ್ರ ಉದ್ಘಾಟಿಸಲು ವಾರಣಾಸಿಗೆ ಆಗಮಿಸಲಿರುವ ಪ್ರಧಾನಿ ಮೋದಿ ಅವರು, ಇದೇ ಸಂದರ್ಭದಲ್ಲಿ 1500 ಕೋಟಿ ರೂ. ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಗಂಗಾ ನದಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ರೋ-ರೋ ಹಡಗುಗಳು, ಬಿಹೆಚ್ಯುನಲ್ಲಿ 100 ಹಾಸಿಗೆಗಳ ಎಂಸಿಹೆಚ್ ವಿಂಗ್, ಗೋದೌಲಿಯಾದಲ್ಲಿ ಮಲ್ಟಿ-ಲೆವೆಲ್ ಪಾರ್ಕಿಂಗ್ ಮತ್ತು ವಾರಣಾಸಿ ಘಾಜಿಪುರದ 3 ಲೇನ್ ಫ್ಲೈಓವರ್ ಸೇತುವೆ ಸೇರಿದಂತೆ ವಿವಿಧ ಸಾರ್ವಜನಿಕ ಯೋಜನೆಗಳು ಮತ್ತು ಕಾರ್ಯಗಳನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.