ನವದೆಹಲಿ: ರಾಜ್ಯ ಸಭೆಯಲ್ಲಿ ಆಡಳಿತಾರೂಢ ಬಿಜೆಪಿ ನಾಯಕರಾಗಿ ಪೀಯುಷ್ ಗೋಯಲ್ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಮೊದಲು ರಾಜ್ಯಸಭೆಯಲ್ಲಿ ಬಿಜೆಪಿ ನಾಯಕರಾಗಿ ತಾವರ್ ಚಂದ್ ಗೆಹ್ಲೋಟ್, ಉಪ ನಾಯಕರಾಗಿ ಪೀಯುಷ್ ಗೋಯಲ್ ಅವರನ್ನು ನೇಮಕ ಮಾಡಲಾಗಿತ್ತು. ಗೆಹ್ಲೋಟ್ ಅವರು ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕವಾಗಿದ್ದು, ಈ ಹಿನ್ನೆಲೆಯಲ್ಲಿ ಇದೀಗ ಗೋಯಲ್ ಅವರು ರಾಜ್ಯ ಸಭೆಯ ಬಿಜೆಪಿ ನಾಯಕರಾಗಿ ನೇಮಕವಾಗಿದ್ದಾರೆ.
ಗೋಯಲ್ ಅವರಿಗೆ 57 ವರ್ಷಗಳಾಗಿದ್ದು, ಪ್ರಸ್ತುತ ಕೇಂದ್ರ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಂಸದೀಯ ವ್ಯವಹಾರಗಳ ಸಚಿವಾಲಯ ಈ ಸಂಬಂಧ ಅಧಿಸೂಚನೆ ಹೊರಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.