ನವದೆಹಲಿ: ಸಾಮಾನ್ಯ ಜನರಲ್ಲಿ ಆತಂಕ ಮೂಡಿಸುವುದಕ್ಕೆಂದೇ ಕೆಲವರು ಕೊರೋನಾ ಲಸಿಕೆಯ ಕೊರತೆ ಇದೆ ಎಂಬುದಾಗಿ ಅನಗತ್ಯ ಹೇಳಿಕೆ ನೀಡುತ್ತಾರೆ ಎಂದು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರು ತಿಳಿಸಿದ್ದಾರೆ.
ಲಸಿಕೆಯ ಕೊರತೆ ಇರುವುದಾಗಿ ಕೆಲವು ರಾಜ್ಯಗಳಿಂದ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಆಯಾಯ ರಾಜ್ಯಗಳಿಗೆ ತಮ್ಮಲ್ಲಿ ಎಷ್ಟು ಪ್ರಮಾಣದಲ್ಲಿ ಲಸಿಕೆಗಳಿವೆ, ಎಷ್ಟು ಪ್ರಮಾಣದಲ್ಲಿ ಪೂರೈಕೆಯಾಗುತ್ತಿದೆ ಮೊದಲಾದ ವಿಚಾರಗಳ ಬಗ್ಗೆ ತಿಳಿದಿದೆ ಎಂದು ಹೇಳಿದ್ದಾರೆ.
ಲಸಿಕೆಯ ಡೋಸ್ ಹಂಚಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಆಯಾಯ ರಾಜ್ಯಗಳಿಗೆ ಮೊದಲೇ ಮಾಹಿತಿ ನೀಡುತ್ತದೆ. ಲಸಿಕೆಗಳ ಅಸಮರ್ಪಕ ನಿರ್ವಹಣೆಯ ಕಾರಣಕ್ಕೆ ಈ ಸಮಸ್ಯೆ ಆಗುತ್ತಿದೆ. ಕೆಲವು ರಾಜ್ಯಗಳಲ್ಲಿ ಲಸಿಕೆ ಪಡೆಯುವ ನಿಟ್ಟಿನಲ್ಲಿ ಉದ್ದನೆಯ ಸಾಲು ಕಾಣಬಹುದು. ಈ ವಿದ್ಯಮಾನಗಳು ಸಮಸ್ಯೆಯ ಮೂಲ, ಯಾತಕ್ಕಾಗಿ ಸಮಸ್ಯೆಯಾಗುತ್ತಿದೆ ಎಂಬುದಕ್ಕೆ ಉತ್ತರವಾಗಿದೆ ಎಂದು ಅವರು ಹೇಳಿದ್ದಾರೆ.
ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ರಾಜಸ್ಥಾನಗಳಲ್ಲಿ ಕೊರೋನಾ ಸೋಂಕು ಮತ್ತೆ ಏರಿಕೆಯಾಗುತ್ತಿದೆ. ಈ ರಾಜ್ಯಗಳಿಂದಲೇ ಲಸಿಕೆಯ ಕೊರತೆಯ ಬಗ್ಗೆ ದೂರುಗಳು ಕೇಳಿ ಬಂದಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.