ಬೆಂಗಳೂರು: ಟೊಕಿಯೋ ಒಲಿಂಪಿಕ್ಸ್ಗೆ ಆಯ್ಕೆಯಾಗಿರುವ ರಾಜ್ಯದ ಮೂವರು ಕ್ರೀಡಾಪಟುಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಘೋಷಿಸಲಾಗಿದ್ದ ತಲಾ 10 ಲಕ್ಷ ರೂ. ಪ್ರೋತ್ಸಾಹ ಧನವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿತರಿಸಿದರು.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಕ್ರೀಡಾಪಟು ಶ್ರೀಹರಿ ನಟರಾಜ್ ಅವರಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು. ಹಾಗೆಯೇ ಅದಿತಿ ಅಶೋಕ್, ಪೌವಾದ್ ಮಿರ್ಜಾ ಅವರಿಗೆ ಅವರ ಪಾಲಕರ ಮೂಲಕ ಪ್ರೋತ್ಸಾಹ ಧನದ ಚೆಕ್ ಅನ್ನು ಸಿಎಂ ಯಡಿಯೂರಪ್ಪ ಮತ್ತು ಸಚಿವ ಡಾ. ನಾರಾಯಣ್ ಗೌಡ ಅವರು ನೀಡಿ, ಶುಭಹಾರೈಸಿದರು.
ಇದೇ ಸಂದರ್ಭದಲ್ಲಿ ಒಲಿಂಪಿಕ್ಸ್ನಲ್ಲಿ ಚಿನ್ನ, ಬೆಳ್ಳಿ, ಕಂಚಿನ ಪದಕ ಗೆದ್ದವರಿಗೆ ಕ್ರಮವಾಗಿ 5 ಕೋಟಿ, 3 ಕೋಟಿ ಮತ್ತು 2 ಕೋಟಿ ರೂ. ಬಹುಮಾನವನ್ನು ಅವರು ಇದೇ ಸಂದರ್ಭದಲ್ಲಿ ಸರ್ಕಾರದ ಪರವಾಗಿ ಘೋಷಿಸಿದರು.
ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾಗವಹಿಸುತ್ತಿರುವ ರಾಜ್ಯದ ಕ್ರೀಡಾಪಟು ಶ್ರೀಹರಿ ನಟರಾಜ್ ಅವರಿಗೆ ಮುಖ್ಯಮಂತ್ರಿ @BSYBJP ರವರು ಇಂದು 10 ಲಕ್ಷ ರೂ.ಗಳ ಪ್ರೋತ್ಸಾಹಧನ ವಿತರಿಸಿ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಶ್ರೀಹರಿ ಅವರ ತಾಯಿಯನ್ನು ಸನ್ಮಾನಿಸಲಾಯಿತು. (1/2)#Tokyo2020Olympics #Cheer4India #OlympicsKiAasha pic.twitter.com/tUofojPXDb
— CM of Karnataka (@CMofKarnataka) July 14, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.