ಬೆಂಗಳೂರು: ರಾಜ್ಯದ ಬಹುನಿರೀಕ್ಷಿತ ಸಾರಿಗೆ ಇಲಾಖೆಯ ಕರ್ನಾಟಕ ವಿದ್ಯುತ್ ಟ್ಯಾಕ್ಸಿ ಯೋಜನೆ 2021 ನ್ನು ಸಿಎಂ ಯಡಿಯೂರಪ್ಪ ಅವರು ಅನಾವರಣಗೊಳಿಸಿದರು.
ಸಾರ್ವಜನಿಕ ಸಾರಿಗೆಯ ಕೊನೆಯ ಮೈಲಿನ ಸಂಪರ್ಕ ಸುಧಾರಣೆಗಾಗಿ ‘ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ’ ಎಂಬ ಪರಿಕಲ್ಪನೆ ರೂಪಿಸಲಾಗಿದೆ. 2020 ರ ಬಜೆಟ್ನಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಒತ್ತು ನೀಡಲಾಗಿದೆ. 300 ಎಸಿ ಎಲೆಕ್ಟ್ರಿಕ್ ಬಸ್ಗಳು ಮತ್ತು 500 ಸಾಮಾನ್ಯ ಎಲೆಕ್ಟ್ರಿಕ್ ಬಸ್ಗಳನ್ನು ಖರೀದಿಸುವ ಮೆಟ್ರೋ ಫೀಡರ್ ಸಾರಿಗೆಗಾಗಿ ಸ್ಮಾರ್ಟ್ ಸಿಟಿ ಯೋಜನೆಯಡಿ 90 ಎಲೆಕ್ಟ್ರಿಕ್ ಬಸ್ಗಳನ್ನು ಖರೀದಿಸುವುದಾಗಿ ಯಡಿಯೂರಪ್ಪ ಘೋಷಿಸಿದ್ದರು. ಇದರ ಜೊತೆಯಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯನ್ನು ಸಹ ಘೋಷಿಸಿದ್ದರು.
ಈ ಯೋಜನೆಯಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯನ್ನು ಅನಾವರಣ ಮಾಡಿದರು.
ಕಾರ್ಯಕ್ರಮದಲ್ಲಿ ಸಚಿವ ಲಕ್ಷ್ಮಣ್ ಸವದಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಮುಖ್ಯಮಂತ್ರಿ @BSYBJP ರವರು ಇಂದು ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆಯನ್ನು ಅನಾವರಣಗೊಳಿಸಿದರು.
ಉಪಮುಖ್ಯಮಂತ್ರಿ @LaxmanSavadi, ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಸಾರಿಗೆ ಇಲಾಖೆ ಪ್ರಧಾನಕಾರ್ಯದರ್ಶಿ ಅಂಜುಮ್ ಪರ್ವೇಜ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಉಪಸ್ಥಿತರಿದ್ದರು. pic.twitter.com/Qp7Z7R9Z69
— CM of Karnataka (@CMofKarnataka) July 14, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.