ನವದೆಹಲಿ: ದೇಶದ ಐಟಿ ಕಾಯ್ದೆಯ ಸೆಕ್ಷನ್ 66-ಎ ರದ್ದಾಗಿರುವ ಕಾರಣ, ಈ ಸೆಕ್ಷನ್ ಅಡಿಯಲ್ಲಿ ಯಾವುದೇ ದೂರುಗಳನ್ನು ದಾಖಲಿಸದಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದೆ.
ಅದರೊಂದಿಗೆ ಈಗಾಗಲೇ ಈ ಸೆಕ್ಷನ್ ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದ್ದರೆ, ಅಂತಹ ಪ್ರಕರಣಗಳನ್ನು ಹಿಂಪಡೆಯುವಂತೆಯೂ ಗೃಹ ಸಚಿವಾಲಯ ಹೇಳಿದೆ. ಈ ಸೆಕ್ಷನ್ ರದ್ದಾಗಿದ್ದರೂ ಮತ್ತೆ ಅದೇ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗುತ್ತಿರುವುದು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಸೂಚನೆಯಂತೆ, ಅಂತಹ ಪ್ರಕರಣಗಳನ್ನು ಹಿಂಪಡೆಯುವಂತೆ ಮತ್ತು ಆ ಸೆಕ್ಷನ್ ಅಡಿಯಲ್ಲಿ ಮುಂದಿನ ದಿನಗಳಲ್ಲಿ ಪ್ರಕರಣ ದಾಖಲಿಸದಂತೆ ಗೃಹ ಸಚಿವಾಲಯ ಆದೇಶಿಸಿದೆ.
ಐಟಿ ಕಾಯ್ದೆಯ ಸೆಕ್ಷನ್ 66 – ಎ ಕಾಯ್ದೆ ಕಠೋರ ಮತ್ತು ಅಸಾಂವಿಧಾನಿಕ ಎಂದು ಸುಪ್ರೀಂಕೋರ್ಟ್ ತಿಳಿಸಿತ್ತು. ಮಾರ್ಚ್ 23 ರಂದು ಈ ಸೆಕ್ಷನ್ ಅನ್ನು ರದ್ದು ಮಾಡಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.