ನವದೆಹಲಿ: ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ವರೆಗೆ 40.31 ಕೋಟಿ ಡೋಸ್ ಕೊರೋನಾ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
1.92 ಕೋಟಿಗೂ ಅಧಿಕ ಡೋಸ್ ಲಸಿಕೆಗಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವುದಾಗಿ ಅವರು ಹೇಳಿದ್ದಾರೆ. ಶೀಘ್ರದಲ್ಲೇ 83,85,790 ಡೋಸ್ ಲಸಿಕೆಗಳು ಲಭ್ಯವಾಗಲಿರುವುದಾಗಿಯೂ ಸಚಿವಾಲಯ ತಿಳಿಸಿದೆ.
ಎಲ್ಲಾ ಮೂಲಗಳ ಮೂಲಕ ಈ ವರೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 40,31,74,380 ಡೋಸ್ ಲಸಿಕೆಗಳನ್ನು ನೀಡಲಾಗಿದೆ. ಜೊತೆಗೆ 83,85,790 ಡೋಸ್ ಲಸಿಕೆಗಳು ಶೀಘ್ರದಲ್ಲೇ ಸರಬರಾಜಾಗಲಿವೆ. ಬಳಕೆಗೆ ಬಾರದ ಲಸಿಕೆಗಳನ್ನು ಒಳಗೊಂಡಂತೆ ಈ ವರೆಗೆ ಒಟ್ಟು 38,39,02,614 ಡೋಸ್ ಲಸಿಕೆಗಳನ್ನು ಬಳಕೆ ಮಾಡಲಾಗಿದೆ ಎಂದು ಸಚಿವಾಲಯ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.