ನವದೆಹಲಿ: ಹವಾಮಾನ ಬದಲಾವಣೆಗೆ ಸಂಬಂಧಿಸಿದ ಪ್ಯಾರಿಸ್ ಒಪ್ಪಂದದನ್ವಯ ಭಾರತವು ನಿಗದಿತ ಗುರಿಯನ್ನು ಮೀರಿ ಇಂಗಾಲದ ಹೊರಸೂಸುವಿಕೆಯ ಪ್ರಮಾಣವನ್ನು ಕಡಿಮೆಗೊಳಿಸಲಿದೆ ಎಂದು ಕೇಂದ್ರ ಸಚಿವ ಆರ್. ಕೆ. ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅವರು ಸಿಐಐ ಆಯೋಜಿಸಿದ್ದ ‘ಆತ್ಮ ನಿರ್ಭರ ಭಾರತ: ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಸ್ವಾವಲಂಬನೆ’ ಎಂಬ ವಿಷಯದ ಕುರಿತು ನಡೆದ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪ್ಯಾರಿಸ್ ಒಪ್ಪಂದದಂತೆ 2030 ರ ವೇಳೆಗೆ ಭಾರತ 33% ಗಳಷ್ಟು ಇಂಗಾಲದ ಹೊರಸೂಸುವಿಕೆ ಪ್ರಮಾಣವನ್ನು ಕಡಿಮೆ ಮಾಡಬೇಕಿದೆ. ಈ ಮಿತಿಯನ್ನು ಮೀರಿ ಗುರಿ ತಲುಪಲು ಭಾರತ ಕಾರ್ಯಪ್ರವೃತ್ತವಾಗಿದೆ ಎಂದು ಅವರು ಹೇಳಿದ್ದಾರೆ. 2030 ರ ವೇಳೆಗೆ ಭಾರತ 40% ಗಳಷ್ಟು ಇಂಧನವನ್ನು ಪಳೆಯುಳಿಕೆಯೇತರ ಮೂಲಗಳಿಂದ ಉತ್ಪಾದನೆ ಮಾಡಬೇಕಾಗಿದೆ ಎಂಬುದಾಗಿಯೂ ಪ್ಯಾರಿಸ್ ಒಪ್ಪಂದದಲ್ಲಿ ಹೇಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.