ಬೆಂಗಳೂರು: ಕರ್ನಾಟಕದಲ್ಲಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಪಾವತಿ ವ್ಯವಸ್ಥೆಯನ್ನು ಸಂಪೂರ್ಣವಾಗಿ ಗಣಕೀಕರಣಗೊಳಿಸಲಾಗಿದೆ ಎಂದು ಇ- ಆಡಳಿತದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಾಜೀವ್ ಚಾವ್ಲಾ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಅವರು, ಸಮಾಜ ಕಲ್ಯಾಣ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ, ವೈದ್ಯಕೀಯ ಶಿಕ್ಷಣ, ತಾಂತ್ರಿಕ ಶಿಕ್ಷಣ , ವಿಶೇಷ ಚೇತನ ಕಲ್ಯಾಣ, ಕಾಲೇಜು ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳಿಂದ ನೀಡಲಾಗುವ ವಿದ್ಯಾರ್ಥಿ ವೇತನವನ್ನು ಇನ್ನು ಮುಂದೆ ನೇರವಾಗಿ ಫಲಾನುಭವಿ ವಿದ್ಯಾರ್ಥಿಗಳ ಖಾತೆಗೆ ಜಮೆ ಮಾಡಲಾಗುವುದು ಎಂದು ಹೇಳಿದರು.
ರಾಜ್ಯಾದ್ಯಂತ 70 ವಿಶ್ವವಿದ್ಯಾಲಯಗಳು , 8 ಇಲಾಖೆಗಳು 14 ಸಾವಿರದ 143 ಕಾಲೇಜುಗಳು, 243 ಕೋರ್ಸ್ಗಳು ಸೇರಿದಂತೆ ವಿವಿಧ ಶೈಕ್ಷಣಿಕ ವ್ಯವಸ್ಥೆಯ ಮಾಹಿತಿಯನ್ನು ಕಲೆಹಾಕಲಾಗಿದೆ. ವಿದ್ಯಾರ್ಥಿಗಳ ಆಧಾರ್ ಮತ್ತು ಶಾಲಾ ಕಾಲೇಜಿನ ದಾಖಲಾತಿ ಸಂಖ್ಯೆ, ಜಾತಿ ಪ್ರಮಾಣ ಪತ್ರದ ಸಂಖ್ಯೆಯನ್ನು ನಮೂದಿಸಿ ನೋಂದಾಯಿಸಿಕೊಳ್ಳಬೇಕು. ಅದನ್ನು ಪರಿಶೀಲಿಸಲು ರಾಜ್ಯಾದ್ಯಂತ 11 ಸಾವಿರಕ್ಕೂ ಹೆಚ್ಚು ಅಧಿಕಾರಿಗಳನ್ನು ನೇಮಿಸಲಾಗಿದ್ದು, ಅವರು ಅಂಗೀಕರಿಸಿದ ನಂತರ ವಿದ್ಯಾರ್ಥಿ ವೇತನ ನೇರವಾಗಿ ಖಾತೆಗೆ ವರ್ಗಾವಣೆಯಾಗಲಿದೆ. ಆಧಾರ್ ಸಂಖ್ಯೆ ಆಧರಿಸಿ, ವಿದ್ಯಾರ್ಥಿಗಳ ಹಾಜರಾತಿಯನ್ನು ನಿಗಾವಹಿಸುವ ವ್ಯವಸ್ಥೆ ಕೂಡ ರೂಪಿಸಲಾಗಿದೆ. ಹೀಗಾಗಿ ವಿದ್ಯಾರ್ಥಿ ವೇತನ ದುರುಪಯೋಗವಾಗುವುದಿಲ್ಲ ಹಾಗೂ ವಿಳಂಬಕ್ಕೆ ಅವಕಾಶ ಇರುವುದಿಲ್ಲ. ಸುಮಾರು 40 ಲಕ್ಷ ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗಲಿದೆ ಎಂದು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.