ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತಗಾರರ ನಿಯಮಗಳು ಚಾಲ್ತಿಯಲ್ಲಿದ್ದು, ಶಾಸನಬದ್ಧ ನಿಯಮಗಳು ಮೂಲೆಗುಂಪಾಗಿದೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಕೋಲ್ಕತ್ತಾ ಹೈಕೋರ್ಟ್ಗೆ ವರದಿ ನೀಡಿದೆ.
ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರದ ಬಗ್ಗೆ ವರದಿ ಸಲ್ಲಿಸುವಂತೆ ಎನ್ಎಚ್ಆರ್ಸಿಗೆ ಹೈಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಅಗತ್ಯ ಅಧ್ಯಯನ ನಡೆಸಿ ವರದಿ ನೀಡಿದ್ದು, ಪಶ್ಚಿಮ ಬಂಗಾಳದಲ್ಲಿ ಶಾಸನಬದ್ಧ ನಿಯಮಗಳು ಮೂಲೆಗುಂಪಾಗಿರುವುದು ದೇಶದ ಸಂವಿಧಾನಕ್ಕೆ ಸಾವಿನ ಗಂಟೆಯಾಗಲಿದೆ ಎಂದು ಹೇಳಿದೆ.
ಈ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆಯೂ ಎನ್ಎಚ್ಆರ್ಸಿ ವರದಿಯಲ್ಲಿ ತಿಳಿಸಿದೆ. ಕೊಲೆ, ಅತ್ಯಾಚಾರ, ಕಿರುಕುಳ, ಹಿಂಸಾಚಾರ ಇದ್ಯಾವುದೂ ಅರಿಯದೇ ನಡೆಯುವ ಕೆಲಸಗಳಲ್ಲ. ಇವೆಲ್ಲವನ್ನೂ ಎದುರಾಳಿ ಪಕ್ಷದನಿರ್ಧಿಷ್ಟ ವ್ಯಕ್ತಿಯನ್ನೇ ಗುರಿಯಾಗಿಸಿ ನಡೆಸಲಾಗಿದೆ. ಇದು ಪ್ರತಿಕಾರದ ಉದ್ದೇಶ ಹೊಂದಿದ್ದು, ಈ ನಿಟ್ಟಿನಲ್ಲಿ ತನಿಖೆ ನಡೆಯಬೇಕು ಎಂದು ಅದು ತನಿ 50 ಪುಟಗಳ ವರದಿಯಲ್ಲಿ ಉಲ್ಲೇಖಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.