ಬೆಂಗಳೂರು: ನವದೆಹಲಿಗೆ ಭೇಟಿ ನೀಡುವುದನ್ನು ಖಾತ್ರಿ ಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಸಂಪುಟ ಪುನರಚನೆಗೆ ಸಂಬಂಧಿಸಿದಂತೆ ಯಾವುದೇ ರೀತಿಯಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ತಾವು ಇಂದು ನವದೆಹಲಿಗೆ ತೆರಳುತ್ತಿರುವುದಾಗಿ ಹೇಳಿದ್ದಾರೆ. ಅಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಮತ್ತು ಕೇಂದ್ರದ ಅನೇಕ ಮಂತ್ರಿಗಳನ್ನು ಭೇಟಿ ಮಾಡಿ ರಾಜ್ಯದ ಸರ್ವತೋಮುಖ ಅಭಿವೃದ್ಧಿ, ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ.
ರಾಜ್ಯದಲ್ಲಿ ಸ್ಥಗಿತಗೊಳಿಸಲಾದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರಿಗೆ ವಿವರಣೆ ನೀಡಲಾಗುತ್ತದೆ. ಈ ಸಂಬಂಧ ಭೇಟಿಗೆ ಪ್ರಧಾನಿ ಅವರು ಸಮಯ ನೀಡಲಿದ್ದಾರೆ ಎಂಬುದಾಗಿಯೂ ಅವರು ತಿಳಿಸಿದ್ದಾರೆ. ಶನಿವಾರ ರಾಜ್ಯಕ್ಕೆ ಮರಳುವುದಾಗಿಯೂ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.