ಬೆಂಗಳೂರು: ಕೊರೋನಾ ಸೋಂಕಿನ ಪರಿಸ್ಥಿತಿ ಮತ್ತು ಲಸಿಕೆ ಹಂಚಿಕೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನೊಳಗೊಂಡಂತೆ ಆರು ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಸಂವಾದ ನಡೆಸಿದ್ದಾರೆ.
ಈ ಸಂವಾದದಲ್ಲಿ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ, ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್, ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ, ಒಡಿಶಾ ಸಿಎಂ ನವೀನ್ ಪಟ್ನಾಯಕ್, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಛಯನ್ ಅವರು ಭಾಗವಹಿಸಿದ್ದಾರೆ.
ಆಯಾಯ ರಾಜ್ಯಗಳ ಕೊರೋನಾ ಪರಿಸ್ಥಿತಿ, ಕೊರೋನಾ ಲಸಿಕಾ ಅಭಿಯಾನದ ಸ್ಥಿತಿಗತಿಗಳ ಬಗ್ಗೆ ಆಯಾ ರಾಜ್ಯದ ಮುಖ್ಯಮಂತ್ರಿಗಳು ಪ್ರಧಾನಿ ಮೋದಿ ಅವರಿಗೆ ವಿವರಣೆ ನೀಡಿದ್ದಾರೆ. ಹಾಗೆಯೇ ಕೊರೋನಾ ಸಂಬಂಧಿಸಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ, ಆರೋಗ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿ ಮಾಡುವತ್ತ, ಹೆಚ್ಚಿಸುವತ್ತ ಹೆಚ್ಚು ಗಮನ ನೀಡುವಂತೆಯೂ ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿಗಳಿಗೆ ಈ ಸಂದರ್ಭದಲ್ಲಿ ಸೂಚಿಸಿದ್ದಾರೆ.
ಕೊರೋನಾ ಎದುರಿಸಲು ಕೇಂದ್ರ ಸರ್ಕಾರ 23 ಸಾವಿರ ಕೋಟಿ ರೂ. ಗಳ ತುರ್ತು ಪ್ಯಾಕೇಜ್ ಘೋಷಿಸಿದೆ. ಎಲ್ಲಾ ರಾಜ್ಯಗಳು ಆರೋಗ್ಯ ಮೂಲಸೌಕರ್ಯಗಳನ್ನು ಬಲಪಡಿಸುವ ಕೆಲಸಕ್ಕೆ ಈ ಮೊತ್ತವನ್ನು ಬಳಕೆ ಮಾಡಬೇಕು. ಗ್ರಾಮೀಣ ಭಾಗಗಳಲ್ಲಿ ಲಸಿಕೆ ನೀಡುವುದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಗಮನ ನೀಡುವಂತೆ ಅವರು ಸೂಚಿಸಿದ್ದಾರೆ. ಹಾಗೆಯೇ ಪ್ರವಾಸೋದ್ಯಮ, ಮಾರುಕಟ್ಟೆಗಳಲ್ಲಿ ಜನರು ಗುಂಪಾಗಿ ಕಾಣಿಸಿಕೊಳ್ಳದಂತೆ ಎಚ್ಚರ ವಹಿಸಬೇಕು. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಅವರು ನಿರ್ದೇಶಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.