ಬೆಂಗಳೂರು: ಕರ್ನಾಟಕಕ್ಕೆ ತಿಂಗಳಿಗೆ ಕನಿಷ್ಠ 1.5 ಕೋಟಿ ಡೋಸ್ಗಳಷ್ಟು ಕೊರೋನಾ ಲಸಿಕೆಗಳನ್ನು ಒದಗಿಸುವಂತೆ ಸಿಎಂ ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಪ್ರಧಾನಿ ಮೋದಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಡಿಯೋ ಸಂವಾದ ನಡೆಸಿದ ಅವರು, ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಇಳಿಮುಖವಾಗಿದೆ. 1900 ಕ್ಕೆ ಇಳಿದಿದೆ. ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ 400 ರಷ್ಟು ಪ್ರಕರಣಗಳಿವೆ. ಪಾಸಿಟಿವಿಟಿ ದರ 1.42% ಗಳಷ್ಟಿದೆ. ಮರಣ ಪ್ರಮಾಣ 1.25% ಗೆ ಇಳಿಕೆಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಈ ವರೆಗೆ 2.62 ಕೋಟಿಗಳಷ್ಟು ಲಸಿಕೆ ನೀಡಲಾಗಿದೆ. ಪ್ರತಿ ನಿತ್ಯ 5 ಲಕ್ಷ ಡೋಸ್ಗಳಂತೆ ತಿಂಗಳಿಗೆ 1.5 ಕೋಟಿ ಲಸಿಕೆ ಒದಗಿಸುವಂತೆ ಮುಖ್ಯಮಂತ್ರಿಗಳು ಪ್ರಧಾನಿಗಳಿಗೆ ಮನವಿ ಮಾಡಿದ್ದಾರೆ. ಕೊರೋನಾ ಪಾಸಿಟಿವಿಟಿ ದರ, ಪ್ರಕರಣಗಳ ಸಂಖ್ಯೆ, ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸುಗಳನ್ನು ಆಧರಿಸಿ ನಿರ್ಬಂಧಗಳನ್ನು ವಿಧಿಸಲು ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಿರುವುದಾಗಿ ಅವರು ತಿಳಿಸಿದ್ದಾರೆ.
ಕೊರೋನಾ ಮೂರನೇ ಅಲೆಗೆ ಸಂಬಂಧಿಸಿದಂತೆ ಅದನ್ನು ಸಮರ್ಪಕವಾಗಿ ಎದುರಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು, ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸುತ್ತಿದೆ ಎಂದು ಅವರು ಪ್ರಧಾನಿಗಳಿಗೆ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.