ನವದೆಹಲಿ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಪುಲ್ವಾಮಾದ ಟ್ರಾಲ್ ಪ್ರದೇಶದಲ್ಲಿ ಮಾರ್ಟರ್ ಬಾಂಬ್, ಮದ್ದು ಗುಂಡುಗಳು ಸೇರಿದಂತೆ ಅಪಾರ ಪ್ರಮಾಣದಲ್ಲಿ ಸ್ಫೋಟಕಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಜಮ್ಮು ಕಾಶ್ಮೀರದ ಪೊಲೀಸ್ ಇಲಾಖೆ ತಿಳಿಸಿದೆ.
ಆವಂತಿಪೋರಾ ಪ್ರದೇಶದಲ್ಲಿ ಭಯೋತ್ಪಾದಕರಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆಯನ್ನು ನಡೆಸಲಾಗಿದ್ದು, ಈ ಸಂದರ್ಭದಲ್ಲಿ ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳು ದೊರೆತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಉಗ್ರಗಾಮಿಗಳು ಮಣ್ಣಿನೊಳಗಡೆ ಅಡಗಿಸಿಟ್ಟಿದ್ದ ಸ್ಫೋಟಕಗಳು ಇದಾಗಿದೆ. ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.