ನವದೆಹಲಿ: ದೇಶದಲ್ಲಿ ಕೊರೋನಾ ಎರಡನೇ ಅಲೆಯ ಅಬ್ಬರ ಕ್ರಮೇಣ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 38,079 ಜನರಲ್ಲಿ ಕೊರೋನಾ ಸೋಂಕು ಹೊಸದಾಗಿ ಕಾಣಿಸಿಕೊಂಡಿದೆ. 560 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಇಂದಿನ ದತ್ತಾಂಶಗಳ ಪ್ರಕಾರ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 31,063,987 ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,13,123 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 424025 ಕ್ಕೆ ಕುಸಿತವಾಗಿದೆ. ಕಳೆದ 24 ಗಂಟೆಗಳಲ್ಲಿ 41000 ಮಂದಿ ಚೇತರಿಸಿಕೊಂಡಿದ್ದು, ಆ ಮೂಲಕ ಈ ವರೆಗೆ ಚೇತರಿಕೆ ಕಂಡವರ ಸಂಖ್ಯೆ 3,01,04,720 ಕ್ಕೆ ಏರಿಕೆಯಾಗಿದೆ. ನಿನ್ನೆ ದೇಶದಲ್ಲಿ 1998715 ಜನರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ವರೆಗೆ 44,20,21,954 ಜನರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಸಚಿವಾಲಯ ವರದಿಯಲ್ಲಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.