ತಿರುವನಂತಪುರ: ಕೇರಳದ ಪ್ರಸಿದ್ಧ ದೇವಾಲಯ ಶಬರಿಮಲೆ ಅಯ್ಯಪ್ಪ ಸ್ವಾಮಿಯ ದೇಗುಲ ಇಂದಿನಿಂದ ಮತ್ತೆ ಭಕ್ತಾದಿಗಳಿಗೆ ಮುಕ್ತಗೊಂಡಿದೆ.
ತಿಂಗಳ ಐದು ದಿನಗಳ ಪೂಜೆಯನ್ನು ನೆರವೇರಿಸುವ ನಿಟ್ಟಿನಲ್ಲಿ ದೇವಳವನ್ನು ತೆರೆಯಲಾಗಿದೆ. ಆನ್ಲೈನ್ ಸರದಿಯನ್ನು ಅನುಸರಿಸಿ ಕೇವಲ 5000 ಮಂದಿ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ದೇವಾಲಯದಲ್ಲಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೇವಾಲಯದ ಆವರಣದಲ್ಲಿ ಭಕ್ತರ ನಡವಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳೆರಡೂ ಮಾರ್ಗಸೂಚಿಯನ್ನು ಹೊರಡಿಸಿವೆ. ಇದರನ್ವಯ ಇಂದಿನಿಂದ ಆರಂಭವಾಗುವ ಮಾಸಿಕ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳುವ ಭಕ್ತರಿಗೆ ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸಲಾಗಿದ್ದು, ಅವುಗಳನ್ನು ಪಾಲಿಸಿಕೊಂಡೇ ಸ್ವಾಮಿಯ ದರ್ಶನ ಪಡೆಯಲು ದೇವಸ್ವಂ ಮಂಡಳಿ ಅವಕಾಶ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.