ನವದೆಹಲಿ: ದೇಶದ ಎಂಟು ರಾಜ್ಯಗಳಲ್ಲಿರುವ 14 ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪ್ರಾದೇಶಿಕ ಭಾಷೆಗಳಲ್ಲಿ ಕೋರ್ಸ್ಗಳನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗಿದ್ದು, ಅಖಿಲ ಭಾರತ ತಾಂತ್ರಿಕ ಮಂಡಳಿ ನಿರ್ಧಾರವನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಶ್ಲಾಘಿಸಿದ್ದಾರೆ.
ಎಐಸಿಟಿಇ ದೇಶದ ಹೊಸ ಶಿಕ್ಷಣ ನೀತಿಗೆ ಅನುಗುಣವಾಗಿ ಬಿ.ಟೆಕ್ ಪದವಿಯಲ್ಲಿ ಹಿಂದಿ, ಮರಾಠಿ, ತಮಿಳು, ತೆಲುಗು, ಕನ್ನಡ, ಗುಜರಾತಿ, ಮಲಯಾಳಂ, ಬಂಗಾಳಿ, ಅಸ್ಸಾಮಿ, ಪಂಜಾಬಿ, ಒಡಿಯಾ ಭಾಷೆಗಳಲ್ಲಿ ಕೋರ್ಸ್ಗಳ ಆಯ್ಕೆಗೆ ಅನುಮತಿ ನೀಡಿದೆ. ಈ ಕ್ರಮವನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದು ನಾಯ್ಡು ತಿಳಿಸಿದ್ದಾರೆ.
ಈ ಸಂಬಂಧ ಉಪರಾಷ್ಟ್ರಪತಿಗಳ ಕಾರ್ಯಾಲಯ ಟ್ವೀಟ್ ಮಾಡಿದ್ದು, ಇನ್ನೂ ಹೆಚ್ಚಿನ ಎಂಜಿನಿಯರಿಂಗ್ ಕಾಲೇಜು ಮತ್ತು ಇತರ ತಾಂತ್ರಿಕ ಶಿಕ್ಷಣ ಸಂಸ್ಥೆಗಳು ಪ್ರಾದೇಶಿಕ ಭಾಷೆಗಳಲ್ಲಿ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸುವಂತೆಯೂ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಆಶಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದೆ.
ಇನ್ನೂ ಹೆಚ್ಚಿನ ಇಂಜನಿಯರಿಂಗ್ ಕಾಲೇಜುಗಳು ಹಾಗು ಇತರ ತಾಂತ್ರಿಕ ಶಿಕ್ಷಣ ಸಂಸ್ಥೆಗಳು ಪ್ರಾದೇಶಿಕ ಭಾಷೆಯಲ್ಲಿ ಕೋರ್ಸ್ಗಳನ್ನು ನಡೆಸುವ ಬಗ್ಗೆ ಉಪರಾಷ್ಟ್ರಪತಿಯವರು ಆಶಯ ವ್ಯಕ್ತಪಡಿಸಿದ್ದಾರೆ.
— Vice President of India (@VPSecretariat) July 17, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.