ಬೆಂಗಳೂರು: ಆಗಸ್ಟ್ – ಅಕ್ಟೋಬರ್ಗೂ ಮೊದಲೇ ಪದವಿ ಮತ್ತು ಡಿಪ್ಲೊಮಾ ಸೆಮಿಸ್ಟರ್ಗಳ ಬಾಕಿ ಉಳಿದಿರುವ ಪರೀಕ್ಷೆಗಳನ್ನು ಮುಗಿಸುವಂತೆ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಿಗೂ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್ ಅವರು ಸೂಚಿಸಿದ್ದಾರೆ.
ಡಿಪ್ಲೊಮಾ 1,3 ಮತ್ತು 5 ನೇ ಸೆಮಿಸ್ಟರ್ ಪ್ರಾಯೋಗಿಕ ಪರೀಕ್ಷೆಗಳು ಜುಲೈ 26 – 28 ರ ವರೆಗೆ ನಡೆಯಲಿದೆ. ಇದೇ ಸೆಮಿಸ್ಟರ್ನ ಲಿಖಿತ ಪರೀಕ್ಷೆಗಳು ಆಗಸ್ಟ್ 2 – 21 ರ ವರೆಗಿನ ಅವಧಿಯಲ್ಲಿ ನಡೆಸಲು ಸೂಚಿಸಿದ್ದಾರೆ. ಹಾಗೆಯೇ 2,4 ಮತ್ತು 6 ನೇ ಸೆಮಿಸ್ಟರ್ ಪ್ರಾಯೋಗಿಕ ಪರೀಕ್ಷೆಗಳನ್ನು ನವೆಂಬರ್ 2 -12 ರ ವರೆಗೆ ಮತ್ತು ಲಿಖಿತ ಪರೀಕ್ಷೆಗಳು ನವೆಂಬರ್ 7 ರಿಂದ ಡಿಸೆಂಬರ್ 6 ರ ಮೊದಲು ಪೂರ್ಣಗೊಳಿಸಲು ಸೂಚಿಸಲಾಗಿದೆ.
ಬಹುತೇಕ ರಾಜ್ಯದ ಎಲ್ಲಾ ವಿವಿ ಗಳೂ ಪದವಿ ಪರೀಕ್ಷೆಗಳನ್ನು ಮುಗಿಸಿವೆ. ಕೊರೋನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ವಿವಿ, ಕಲ್ಬುರ್ಗಿ ವಿವಿ, ಬೆಂಗಳೂರು ವಿವಿಗಳು ಪರೀಕ್ಷೆ ನಡೆಸಿಲ್ಲ. ಈ ಮೂರು ವಿವಿಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ಪರೀಕ್ಷೆಗಳನ್ನು ಮುಗಿಸುವಂತೆ ಅವರು ವಿವಿಗಳಿಗೆ ಸೂಚನೆ ನೀಡಿದ್ದಾರೆ.
ಹಾಗೆಯೇ ಕಾಲೇಜು ಆರಂಭಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಒಂದೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳುವುದಾಗಿಯೂ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.