ನವದೆಹಲಿ: ದೇಶದಾದ್ಯಂತ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಸೆಪ್ಟೆಂಬರ್ ಮೂವತ್ತೊರಳಗೆ ದಾಖಲಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಅಕ್ಟೋಬರ್ 1 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭಿಸುವಂತೆ ಯುಜಿಸಿ ಮಾರ್ಗಸೂಚಿಯನ್ನು ಹೊರಡಿಸಿದೆ.
ಸಿಬಿಎಸ್ಇ, ಐಸಿಎಸ್ಇ ಮತ್ತು ರಾಜ್ಯದ ಬೋರ್ಡ್ಗಳು ಫಲಿತಾಂಶ ಪ್ರಕಟಿಸಿದ ಬಳಿಕವಷ್ಟೇ ಪದವಿ ತರಗತಿಗಳ ದಾಖಲಾತಿ ಪ್ರಕ್ರಿಯೆ ಆರಂಭಿಸುವಂತೆ ವಿವಿ ಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಯುಜಿಸಿ ಹೇಳಿದೆ. ಬೋಧನೆ ,ಕಲಿಕೆಯ ಪ್ರಕ್ರಿಯೆಗಳು ಆನ್ಲೈನ್, ಆಫ್ಲೈನ್, ಸಂಯೋಜಿತ ಕ್ರಮಗಳಲ್ಲಿ ಮುಂದುವರಿಯಬೇಕು ಎಂದು ಆಯೋಗ ಸ್ಪಷ್ಟಪಡಿಸಿದೆ.
ಹಾಗೆಯೇ ಕೊರೋನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಅಕ್ಟೋಬರ್ 1 ರಿಂದ ಜುಲೈ 31 ರ ವರೆಗೆ ಕಾಲಕಾಲಕ್ಕೆ ಕೇಂದ್ರ, ರಾಜ್ಯ ಸರ್ಕಾರಗಳು ಹೊರಡಿಸಿರುವ ಅಗತ್ಯ ನಡವಳಿಗಳು, ಮಾರ್ಗಸೂಚಿಗಳನ್ನು ಅನುಸರಿಸುವಂತೆ ಯುಜಿಸಿ ತಿಳಿಸಿದೆ. ಹಾಗೆಯೇ ಇಂತಹ ಸಂಕಷ್ಟದ ಸಂದರ್ಭದಲ್ಲಿ ಪೋಷಕರು ಎದುರಿಸುತ್ತಿರುವ ಆರ್ಥಿಕ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳ ಪ್ರವೇಶ ರದ್ಧತಿ, ವಲಸೆ ಪ್ರಕರಣಗಳಲ್ಲಿ ಶುಲ್ಕ ಸಂಪೂರ್ಣ ಮರುಪಾವತಿ ಆಗಿರುವುದನ್ನು ಖಚಿತ ಪಡಿಸಿಕೊಳ್ಳುವಂತೆ ಯುಜಿಸಿ ಸೂಚಿಸಿದೆ.
ಹಾಗೆಯೇ ಆಗಸ್ಟ್ 31 ರೊಳಗಾಗಿ ವಿವಿ ಗಳು, ಕಾಲೇಜುಗಳು ಅಂತಿಮ ವರ್ಷ ದ, ಅಂತಿಮ ಅವಧಿಯ ಪರೀಕ್ಷೆಗಳನ್ನು ಆನ್ಲೈನ್ ಅಥವಾ ಆಫ್ಲೈನ್ ಮೂಲಕ ನಡೆಸುವಂತೆಯೂ ಸೂಚಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.