ಮೈಸೂರು: ಕೇಂದ್ರ ಶಿಕ್ಷಣ ಸಚಿವಾಲಯದ ಶಾಸನಬದ್ಧ ಅಂಗವಾಗಿರುವ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್, ಕರ್ನಾಟಕ ರಾಜ್ಯ ಮುಕ್ತ ವಿವಿ ನಿರ್ವಹಣಾ ವಿಭಾಗದಡಿ ಸ್ನಾತಕೋತ್ತರ ನಿರ್ವಹಣಾ ಕೋರ್ಸ್ ನಡೆಸಲು ಅನುಮತಿ ನೀಡಿದೆ.
2021- 22 ನೇ ಸಾಲಿಗೆ ಮುಕ್ತ ಹಾಗೂ ದೂರ ಶಿಕ್ಷಣ ಕಲಿಕೆಯ ಕಾರಣಕ್ಕೆ ಎಂ ಬಿ ಎ ಕೋರ್ಸ್ಗೆ 10 ಸಾವಿರ ಸೀಟುಗಳಿಗೆ ದಾಖಲಾತಿ ಕಲ್ಪಿಸಲು ಅನುಮೋದನೆ ದೊರೆತಿದೆ. ದೂರ ಶಿಕ್ಷಣ ಮತ್ತು ಮುಕ್ತ ಮಾದರಿಯಡಿ ಎಂ ಬಿ ಎ ಕೋರ್ಸ್ ನಡೆಸಲು ಕರ್ನಾಟಕ ರಾಜ್ಯ ಮುಕ್ತ ವಿವಿಯಿಂದ ಮಾನ್ಯತೆ ಪಡೆದ ದೇಶದ ಏಕೈಕ ವಿವಿ ಎಂಬ ಹಿರಿಮೆ ತನ್ನದಾಗಿಸಿಕೊಂಡಿದೆ.
ದೇಶದಲ್ಲಿ ಒಟ್ಟು 18 ಮುಕ್ತ ವಿಶ್ವವಿದ್ಯಾಲಯಗಳು ಶೈಕ್ಷಣಿಕ ವಿಚಾರಗಳಲ್ಲಿ ತೊಡಗಿಸಿಕೊಂಡಿದ್ದು, ಈ ಪೈಕಿ ಈ ವಿವಿ ಎಐಸಿಟಿಇ ಯಿಂದ ಮಾನ್ಯತೆ ಪಡೆದ ದೇಶದ ಮೊದಲ ವಿವಿ ಎಂಬ ಹಿರಿಮೆ ಪಡೆದುಕೊಂಡಿದೆ ಎಂದು ವಿವಿ ಮೂಲಗಳು ಸಂತಸ ವ್ಯಕ್ತಪಡಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.