ನವದೆಹಲಿ: ಪ್ರಧಾನಿ ಮೋದಿ ಅವರು ಪ್ರಧಾನಿಯಾದ ಬಳಿಕ ದೇಶಕ್ಕೆ ಸ್ವತಂತ್ರ ಭದ್ರತಾ ನೀತಿ ಬಂದಿದೆ. ಇದು ವಿದೇಶಾಂಗ ನೀತಿಗೆ ಒಳಪಟ್ಟಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ರುಸ್ತುಂಜಿ ಸ್ಮಾರಕ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತದ ಭದ್ರತೆಗೆ ಸಂಬಂಧಿಸಿದಂತೆ ನಮಗೆ ಸ್ವತಂತ್ರ ನೀತಿ ಇದೆ. ಮೋದಿ ಅವರು ಪ್ರಧಾನಿಯಾಗಿ ಆಡಳಿತದ ಚುಕ್ಕಾಣಿ ಹಿಡಿದ ಬಳಿಕವೇ ಇಂತಹ ಒಂದು ಸ್ವತಂತ್ರ ನೀತಿ ದೇಶಕ್ಕೆ ಬಂದಿರುವುದು ಎಂದು ಅವರು ಹೇಳಿದ್ದಾರೆ.
ಎಲ್ಲಾ ರಾಷ್ಟ್ರಗಳ ಜೊತೆಗೆ ಸಾಮರಸ್ಯ, ಶಾಂತಿಯ ಸಂಬಂಧ ಹೊಂದುವುದು ನಮ್ಮ ಉದ್ದೇಶ. ಆದರೆ ದೇಶದ ಶಾಂತಿ ಮತ್ತು ಸಾರ್ವಭೌಮತೆಗೆ ಧಕ್ಕೆ ತಂದಲ್ಲಿ, ಅವರಿಗೆ ಅವರದೇ ಆದ ಭಾಷೆಯಲ್ಲಿ ಉತ್ತರ ನೀಡಲು ನಮ್ಮ ಭದ್ರತಾ ನೀತಿ ಸಿದ್ಧ. ಇಂತಹ ಒಂದು ಮಹತ್ವದ ನೀತಿಯನ್ನು ಅಳವಡಿಸುವ ಮೂಲಕ ಪ್ರಧಾನಿ ಮೋದಿ ಮಹತ್ವದ ಹೆಜ್ಜೆ ಇರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.