ಬೆಂಗಳೂರು: ಕೊರೋನಾ ಸಂಕಷ್ಟದ ನಡುವೆಯೂ ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದ್ದು, ಕೊರೋನಾ ಕಾರಣದಿಂದ ವಿಭಿನ್ನ ರೀತಿಯಲ್ಲಿ ಪರೀಕ್ಷೆಗಳನ್ನು ನಡೆಸಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ.
ಇಂದು ಮತ್ತು ಜುಲೈ 21 ರಂದು ಎರಡು ದಿನಗಳ ಕಾಲ ಈ ಪರೀಕ್ಷೆ ನಡೆಲಿದ್ದು, ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಸಚಿವ ಸುರೇಶ್ ಕುಮಾರ್ ಅವರು ಶುಭ ಕೋರಿದ್ದಾರೆ. ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಶುಭ ಹಾರೈಕೆಗಳು. ಮಕ್ಕಳೆಲ್ಲರೂ ಶಾಂತ ಚಿತ್ತರಾಗಿ, ನಿರಾತಂಕ ಮತ್ತು ಏಕಾಗ್ರತೆಯಿಂದ, ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಅವರು ತಿಳಿಸಿದ್ದಾರೆ.
ಹಾಗೆಯೇ ಕೊರೋನಾ ನಡುವೆಯೇ ಈ ಪರೀಕ್ಷೆಗಳು ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಸಂಬಂಧಿಸಿದಂತೆ ಇರುವ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡುವಂತೆ ಅವರು ಸೂಚಿಸಿದ್ದಾರೆ. ಹಾಗೆಯೇ ಸುರಕ್ಷತೆಯ ಬಗ್ಗೆ ಪಾಲಕರಿಗೂ ಅವರು ಭರವಸೆ ನೀಡಿದ್ದಾರೆ.
ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗುತ್ತಿರುವ ನಮ್ಮ ಹೆಮ್ಮೆಯ ಎಲ್ಲಾ ಮಕ್ಕಳಿಗೆ ಶುಭ ಹಾರೈಕೆಗಳು.
ಮಕ್ಕಳೆಲ್ಲರೂ ಶಾಂತಚಿತ್ತರಾಗಿ, ನಿರಾತಂಕವಾಗಿ, ಏಕಾಗ್ರತೆಯಿಂದ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ.
— S.Suresh Kumar, Minister – Govt of Karnataka (@nimmasuresh) July 18, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.