ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ದೇಶೀಯ ಪ್ರಾದೇಶಿಕ ಭಾಷೆಗಳನ್ನು ಉಳಿಸುವ ನಿಟ್ಟಿನಲ್ಲಿ ಹೆಚ್ಚು ಆದ್ಯತೆ ನೀಡಲಾಗಿದೆ. ಇದರಿಂದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೂ ಸ್ವಾಯತ್ತತೆ ದೊರೆಯಲಿದೆ. ಏಕಪಕ್ಷೀಯ ತೀರ್ಮಾನಗಳೂ ಸಾಧ್ಯವಿಲ್ಲ. ಬಲವಂತದ ಹೇರಿಕೆಯೂ ಅಸಾಧ್ಯ ಎಂದು ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹೆಚ್ಚಿನ ಅಧ್ಯಯನಗಳು ನಮ್ಮ ಭಾಷೆಯಲ್ಲಿಯೇ ಆಗಬೇಕು. ಸ್ಥಳೀಯ ಭಾಷೆಗಳಲ್ಲಿ ವೃತ್ತಿಪರ ಕೋರ್ಸ್ಗಳನ್ನು ಕಲಿಸುವ ಜೊತೆಗೆ ತಂತ್ರಜ್ಞಾನ ಅಭಿವೃದ್ಧಿಗೆ ಅಗತ್ಯವಾದ ಸಹಕಾರ, ಪ್ರೋತ್ಸಾಹ ನೀಡಲಾಗುತ್ತದೆ. ಈ ಶಿಕ್ಷಣ ನೀತಿ 21 ನೇ ಶತಮಾನಕ್ಕೆ ಪೂರಕವಾಗಿದ್ದು, ಭಾಷೆ, ಸಂಸ್ಕೃತಿ, ಇತಿಹಾಸಕ್ಕೆ ಮಹತ್ವ ನೀಡುತ್ತದೆ ಎಂದು ಅವರು ತಿಳಿಸಿದ್ದಾರೆ.
ಯಾವುದೇ ಭಾಷೆಯನ್ನು ಸಮುದಾಯದ ಮೇಲೆ ಹೇರುವುದು ಯಾರೂ ಸಹಿಸಲಾರರು. ನೂತನ ಶಿಕ್ಷಣ ನೀತಿ ವಿಕೇಂದ್ರೀಕರಣ ಶಿಕ್ಷಣಕ್ಕಿಂತ, ಕೇಂದ್ರೀಕೃತ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡುತ್ತದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.