ಮಂಗಳೂರು: ಕೊರೋನಾ ಸಂಕಷ್ಟದ ನಡುವೆಯೂ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಕೇರಳದ ಕಾಸರಗೋಡಿಗೆ ಮಂಗಳೂರಿನಿಂದ ಬಸ್ಸು ಸಂಚಾರವನ್ನು ಕೆಎಸ್ಆರ್ಟಿಸಿ ಇಂದಿನಿಂದ ಆರಂಭಿಸಿದೆ.
ಕಾಸರಗೋಡಿನಿಂದ ಮಂಗಳೂರಿಗೆ ವಿವಿಧ ಕಾರಣಗಳಿಗಾಗಿ ಆಗಮಿಸುವ ಜನರನ್ನು ಗಮನದಲ್ಲಿಟ್ಟುಕೊಂಡು, ಅವರಿಗೆ ಅನುಕೂಲ ಒದಗಿಸಿಕೊಡುವ ನಿಟ್ಟಿನಲ್ಲಿ ಬಸ್ ಸಂಚಾರ ಆರಂಭಕ್ಕೆ ಹಸಿರು ನಿಶಾನೆ ನೀಡಲಾಗಿದೆ. ಕೆಲವೊಂದು ಷರತ್ತುಗಳನ್ನು ಅನ್ವಯಿಸಿ ಈ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕಾಸರಗೋಡಿನಿಂದ ರಾಜ್ಯಕ್ಕೆ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿದಂತೆ ವ್ಯಾಪಾರ ವಹಿವಾಟು ನಡೆಸಲು ಹಲವರು ಬರುತ್ತಾರೆ. ಅವರ ಅನುಕೂಲಕ್ಕಾಗಿ ಈ ನಿರ್ಣಯ ಕೈಗೊಳ್ಳಲಾಗಿದೆ. ಹಾಗೆಯೇ ಕೊರೋನಾ ಮೂರನೇ ಅಲೆ ತಡೆಗೂ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸರ್ಕಾರದ ಮೂಲಗಳು ಹೇಳಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.