ನವದೆಹಲಿ: ನೇಪಾಳದ ನೂತನ ಪ್ರಧಾನಿ ಶೇರ್ ಬಹದ್ದೂರ್ ಡಿಯುಬಾ ಅವರು ಕೆಳಮನೆಯಲ್ಲಿ ವಿಶ್ವಾಸ ಮತ ಪಡೆಯುವಲ್ಲಿ ಸಫಲರಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಡಿಯುಬಾ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಈ ಸಂಬಂಧ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ನೇಪಾಳದ ಪ್ರಧಾನಿ ಡಿಯುಬಾ ಅವರಿಗೆ ಅಭಿನಂದನೆಗಳು. ಅವರ ಯಶಸ್ವಿ ಅಧಿಕಾರಾವಧಿಗೆ ಶುಭಾಶಯಗಳು. ಮುಂದಿನ ದಿನಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಉಭಯ ದೇಶಗಳ ಸಹಭಾಗಿತ್ವ ಹೆಚ್ಚಿಸಲು ಮತ್ತು ಜನರ ಸಂಬಂಧಗಳನ್ನು ಬಲಪಡಿಸಲು, ನಿಮ್ಮೊಂದಿಗೆ ಕೆಲಸ ಮಾಡುವುದಕ್ಕಾಗಿ ನಾವು ಎದುರು ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ.
Congratulations Prime Minister @DeubaSherbdr and best wishes for a successful tenure. I look forward to working with you to further enhance our unique partnership in all sectors, and strengthen our deep-rooted people-to-people ties.
— Narendra Modi (@narendramodi) July 18, 2021
ಡಿಯುಬಾ ಅವರಿಗೆ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ನೇಪಾಳದ ಭಾರತೀಯ ರಾಯಭಾರಿ ವಿನಯ್ ಮೋಹನ್ ಕ್ವತ್ರಾ, ಬಿಜೆಪಿ ವಿದೇಶಾಂಗ ಇಲಾಖೆ ಮುಖ್ಯಸ್ಥ ವಿಜಯ್ ಚೌಥೈವಾಲೆ ಅವರೂ ಅಭಿನಂದಿಸಿದ್ದಾರೆ.
ಡಿಯುಬಾ ಅವರು 165 ಮತಗಳನ್ನು ಪಡೆದು ವಿಶ್ವಾಸ ಮತ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.