ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ತಡರಾತ್ರಿ ನಡೆಸಿದ ಗುಂಡಿನ ದಾಳಿಗೆ, ಲಷ್ಕರ್ ಎ ತೈಬಾದ ಉನ್ನತ ಕಮಾಂಡರ್ ಸೇರಿದಂತೆ ಇಬ್ಬರು ಭಯೋತ್ಪಾದಕರನ್ನು ಸಂಹರಿಸಲಾಗಿದೆ.
ದಕ್ಷಿಣ ಕಾಶ್ಮೀರದ ಚೆಕ್ ಸಾಧಿಕ್ ಖಾನ್ ಪ್ರದೇಶದಲ್ಲಿ ಉಗ್ರಗಾಮಿಗಳು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದ್ದವು. ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಉಗ್ರರು ಗುಂಡು ಹಾರಿಸಿದ್ದು, ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿವೆ. ಈ ಸಂದರ್ಭದಲ್ಲಿ ಯೋಧರ ಗುಂಡಿಗೆ ಇಬ್ಬರು ಉಗ್ರರ ಧಮನವಾಗಿದೆ.
ಮೃತ ಉಗ್ರರಲ್ಲಿ ಓರ್ವ ಎಲ್ಇಟಿ ಉಗ್ರಗಾಮಿ ಸಂಘಟನೆಯ ಉನ್ನತ ಮಟ್ಟದ ಕಮಾಂಡರ್ ಇಶ್ಪಾಕ್ ದಾರ್ ಅಲಿಯಾಸ್ ಅಬು ಅಕ್ರಮ್ ಎಂದು ಗುರುತಿಸಲಾಗಿದೆ. ಇನ್ನೋರ್ವ ಉಗ್ರನನ್ನು ಮಜೀದ್ ಇಕ್ಬಾಲ್ ಎಂಬಾತ ಎಂದು.ಗುರುತಿಸಲಾಗಿದೆ. ಎನ್ಕೌಂಟರ್ ನಡೆದ ಸ್ಥಳದಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು, ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.