ನವದೆಹಲಿ: ಜಮ್ಮು ಕಾಶ್ಮೀರದ ಬುದ್ಗಾಂ ಪ್ರದೇಶದಲ್ಲಿ ನಿಷೇಧಿತ ಉಗ್ರಗಾಮಿ ಸಂಘಟನೆ ಲಷ್ಕರ್ ಎ ತೈಬಾದ ಘಟಕವನ್ನು ಪತ್ತೆ ಹಚ್ಚಿರುವ ಭದ್ರತಾ ಪಡೆಗಳು, ಒಬ್ಬ ಸ್ಥಳೀಯ ಭಯೋತ್ಪಾದಕ ಮತ್ತು ಅವನ ನಾಲ್ಕು ಮಂದಿ ಸಹಚರರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಹಾಗೆಯೇ ಭಾರೀ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಒಂದು ಚೀನೀ ಬಂದೂಕು, ಒಂದು ಮ್ಯಾಗಜಿನ್, 8 ತಾಜಾ ಬಂದೂಕುಗಳು, ಸೇರಿದಂತೆ ಇನ್ನಿತರ ಅಪಾಯಕಾರಿ ವಸ್ತುಗಳನ್ನು ವಶಕ್ಕೆ ಪಡೆದುಕೊಂಡು ತಪಾಸಣೆ ನಡೆಸುತ್ತಿದ್ದಾರೆ.
ಬಂಧಿತ ಉಗ್ರರನ್ನು ಬುದ್ಗಾಂ ನಿವಾಸಿ ಮೊಹಮ್ಮದ್ ಯೂನಿಸ್ ಮಿರ್, ಇಮ್ರಾನ್ ಜಹೂರ್ ಗನಿ, ಉಮರ್ ಫರೂಕ್ ವಾನಿ, ಫೈಜಾನ್ ಕಯೂಮ್ ಗನಿ, ಶಹನವಾಜ್ ಅಹ್ಮದ್ ಮಿರ್ ಎಂದು ಗುರುತಿಸಲಾಗಿದೆ. ಬಂಧಿತರು ಪಾಕಿಸ್ಥಾನ ಮೂಲದ ಉಗ್ರಗಾಮಿ ಸಂಘಟನೆಗಳ ಜೊತೆಗೆ ವಿವಿಧ ಮಾಧ್ಯಮಗಳ ಮೂಲಕ ನಿರಂತರ ಸಂಪರ್ಕದಲ್ಲಿದ್ದವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.