ನವದೆಹಲಿ: ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರನ್ನು ರಾಜ್ಯ ಸಭೆಯಲ್ಲಿ ಸದನದ ಉಪ ನಾಯಕನನ್ನಾಗಿ ನೇಮಕ ಮಾಡಲಾಗಿದೆ.
ಈ ಸಂಬಂಧ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು, ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ಅವರಿಗೆ ಲಿಖಿತ ಸಂವಹನದ ಮೂಲಕ, ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರನ್ನು ರಾಜ್ಯ ಸಭೆಯ ಉಪ ನಾಯಕನಾಗಿ ನೇಮಕ ಮಾಡಲು ಪ್ರಧಾನಿ ಮೋದಿ ನಿರ್ದೇಶಿಸಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಸ್ತುತ ಮೋದಿ ಸಂಪುಟದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾಗಿರುವ ನಖ್ವಿ, ಸಂಪುಟದಲ್ಲಿನ ಮುಸ್ಲಿಂ ಸಮುದಾಯದ ಏಕೈಕ ವ್ಯಕ್ತಿಯಾಗಿದ್ದಾರೆ. 2016 ರಿಂದ ಅವರು ರಾಜ್ಯಸಭಾ ಸದಸ್ಯರಾಗಿದ್ದಾರೆ. ಈ ಹಿಂದೆ ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಸಚಿವರ ಪರಿಷತ್ತಿನ ಸದಸ್ಯರಾಗಿಯೂ ಕಾರ್ಯ ನಿರ್ವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.