ನವದೆಹಲಿ: ಪ್ರಧಾನಿ ಮೋದಿ ಸರ್ಕಾರ ರಕ್ಷಣಾ ಭೂಮಿ ಸುಧಾರಣೆಯ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಂಡಿದ್ದು, ರಕ್ಷಣಾ ಇಲಾಖೆಗೆ ಭೂಮಿಗೆ ಸಂಬಂಧಿಸಿದ ನೀತಿಯಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದೆ.
ಸುಮಾರು ವರ್ಷಗಳ ಬಳಿಕ ಇಂಥಹ ವ್ಯಾಪಕ ಬದಲಾವಣೆಯೊಂದಕ್ಕೆ ಸರ್ಕಾರ ನಿರ್ಧರಿಸಿದೆ. ರೈಲ್ವೆ, ರಸ್ತೆ, ಮೆಟ್ರೋ, ಫ್ಲೈ ಓವರ್ ಸೇರಿದಂತೆ ಇನ್ನೂ ಹಲವಾರು ಪ್ರಮುಖ ಯೋಜನೆಗಳಿಗೆ ರಕ್ಷಣಾ ಭೂಮಿಯ ಅಗತ್ಯ ಇದೆ. ಇಂತಹ ಸಂದರ್ಭದಲ್ಲಿ ಆ ಭೂಮಿಯ ಮೌಲ್ಯಕ್ಕೆ ಸಮನಾದ ಭೂಮಿ ನೀಡಿ ಅಥವಾ ಮಾರುಕಟ್ಟೆ ಮೌಲ್ಯ ಪಾವತಿಸಿ ಭೂಮಿಯನ್ನು ಖರೀದಿಸಲು ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಇಂತಹ ಬದಲಾವಣೆ ತರಲು ಸರ್ಕಾರ ಯೋಜನೆ ರೂಪಿಸಿದೆ.
ಭಾರತದಲ್ಲಿ ಬ್ರಿಟಿಷ್ ಆಡಳಿತದ ಅವಧಿಯಿಂದಲೂ ರಕ್ಷಣಾ ಭೂಮಿಯನ್ನು ರಕ್ಷಣಾ ವಿಚಾರದ ಹೊರತಾಗಿ ಬೇರೆ ಯಾವ ಉದ್ದೇಶಕ್ಕೂ ಬಳಕೆ ಮಾಡಲು ಅವಕಾಶ ಇಲ್ಲ. ಇದೀಗ ಈ ನೀತಿಯಲ್ಲಿ ತಿದ್ದುಪಡಿ ತರುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.