ಬೆಂಗಳೂರು: 2020 – 21 ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಲಿದೆ.
ಈ ಬಾರಿ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಮತ್ತು ಪ್ರಥಮ ಪಿಯುಸಿಯ ಅಂಕಗಳನ್ನು ಪರಿಗಣಿಸಿ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ. ಪರೀಕ್ಷೆಗೆ ನೋಂದಣಿ ಮಾಡಿಕೊಂಡಿರುವ ಹೊಸ ವಿದ್ಯಾರ್ಥಿಗಳು, ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶವನ್ನು ಸಚಿವ ಸುರೇಶ್ ಕುಮಾರ್ ಅವರು ಬಿಡುಗಡೆ ಮಾಡಲಿದ್ದಾರೆ.
ಸಂಜೆ 4 ಗಂಟೆಯ ಬಳಿಕ http://karresults.nic.in/ ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಈಗಾಗಲೇ ನೋಂದಣಿ ಸಂಖ್ಯೆ ಸಿಗದ ವಿದ್ಯಾರ್ಥಿಗಳು http://pue.kar.nic.in/ ನಲ್ಲಿ Know my registration number ಲಿಂಕ್ ಮೂಲಕ ನೋಂದಣಿ ಸಂಖ್ಯೆ ಪಡೆಯಬಹುದು.
ಖಾಸಗಿ ಅಭ್ಯರ್ಥಿಗಳಿಗೆ ಪರೀಕ್ಷಾ ನಂತರವೇ ಫಲಿತಾಂಶ ಪ್ರಕಟವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.