ಬೆಂಗಳೂರು: ರಾಜ್ಯದಲ್ಲಿ ಕಳೆದ ನಾಲ್ಕೂವರೆ ತಿಂಗಳುಗಳ ಬಳಿಕ ಇದೇ ಮೊದಲ ಬಾರಿಗೆ ಅತ್ಯಂತ ಕನಿಷ್ಟ ಕೊರೋನಾ ಪ್ರಕರಣಗಳು ಪತ್ತೆಯಾಗಿರುವುದಾಗಿ ಮೂಲಗಳು ತಿಳಿಸಿದೆ.
ನಿನ್ನೆ 1291 ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಬೆಂಗಳೂರಿನಲ್ಲಿ 300 ಕ್ಕಿಂತ ಕಡಿಮೆ ಪ್ರಕರಣಗಳು ಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ 165 ಪುರುಷರು, 101 ಮಹಿಳೆಯರು ಸೇರಿದಂತೆ 266 ಸೋಂಕಿತರ ಪ್ರಕರಣಗಳು ದೃಢಪಟ್ಟಿದ್ದು, ಈ ವರೆಗೆ 12,22,455 ಜನರಲ್ಲಿ ಸೋಂಕು ಕಾಣಿಸಿಕೊಂಡಂತಾಗಿದೆ. 721 ಪುರುಷರು, 481 ಮಹಿಳೆಯರು ಬಿಡುಗಡೆಯಾಗಿದ್ದಾರೆ. ಆ ಮೂಲಕ 11,95,843 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೋನಾ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ. ರಾಜ್ಯದಲ್ಲಿ ನಿನ್ನೆ 1291 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ದೈನಂದಿನ ಸೋಂಕು ಇನ್ನಷ್ಟು ಇಳಿಮುಖವಾಗಿದೆ. ನಿನ್ನೆ ರಾಜ್ಯದಲ್ಲಿ 40 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಆ ಮೂಲಕ 36,197 ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ. ಆ ಮೂಲಕ 3.9% ಸಾವಿನ ಪ್ರಮಾಣ ದಾಖಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.