ನವದೆಹಲಿ: ಕೇರಳ ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಿದೆ. ಪರಿಸ್ಥಿತಿ ಹೀಗಿರುವಾಗ ಬಕ್ರೀದ್ ಹಿನ್ನೆಲೆಯಲ್ಲಿ ಕೊರೋನಾ ನಿರ್ಬಂಧಗಳನ್ನು ಸಡಿಲಗೊಳಿಸಿರುವ ಕೇರಳ ಸಿಎಂ ಪಿಣರಾಯಿ ವಿಜಯನ್ ಕ್ರಮ ಸರಿಯಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಸರ್ಕಾರದ ಈ ನಡೆಯಿಂದ ಕೊರೋನಾ ಸೋಂಕು ಮತ್ತಷ್ಟು ಏರಿಕೆಯಾದಲ್ಲಿ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ಯನ್ನು ಕೇರಳ ಸರ್ಕಾರಕ್ಕೆ ನೀಡಿದೆ.
ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಆರ್. ಎಫ್. ನರೀಮನ್, ಬಿ. ಆರ್. ಗವಾಯಿ ಅವರನ್ನೊಳಗೊಂಡ ನ್ಯಾಯಪೀಠ ಈ ಎಚ್ಚರಿಕೆ ನೀಡಿದೆ. ಕೇರಳ ಸರ್ಕಾರದ ಈ ಕ್ರಮ ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದಂತಾಗಿದೆ ಎಂದು ಕೋರ್ಟ್ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.