ಬೆಂಗಳೂರು: ರಾಜ್ಯದಲ್ಲಿ 2020 – 21 ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದೆ.
ಸಚಿವ ಸುರೇಶ್ ಕುಮಾರ್ ಅವರು ಸುದ್ದಿಗೋಷ್ಟಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯದೇ ಇದ್ದು, ವಿದ್ಯಾರ್ಥಿಗಳು ಈ ಹಿಂದೆ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಫಲಿತಾಂಶ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಒಟ್ಟು 6,66,497 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಪೈಕಿ 3,35,138 ಬಾಲಕರು ಹಾಗೂ 3,31,359 ವಿದ್ಯಾರ್ಥಿನಿಯರು ಇದ್ದಾರೆ. ಇವರಲ್ಲಿ 1,95,650 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. 2,52,056 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 1,47,055 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಈ ಬಾರಿಯ ಪಿಯು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಅಗ್ರಸ್ಥಾನ ಪಡೆದಿದೆ. ದ.ಕ. ಜಿಲ್ಲೆಯ 445 ವಿದ್ಯಾರ್ಥಿಗಳು 600 ಕ್ಕೆ 600 ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ. ಎರಡನೇ ಸ್ಥಾನದಲ್ಲಿ ಬೆಂಗಳೂರು ಇದೆ.
ಈ ಫಲಿತಾಂಶ ಪರಿಶೀಲನೆಗೆ ವಿದ್ಯಾರ್ಥಿಗಳು ಕಾಲೇಜುಗಳಿಗೆ ತೆರಳಬೇಕಿಲ್ಲ. ಬದಲಾಗಿ ಅವರು ಈಗಾಗಲೇ ನೋಂದಣಿ ಮಾಡಿರುವ ಮೊಬೈಲ್ ಸಂಖ್ಯೆಗೆ ಫಲಿತಾಂಶ ಸಂದೇಶದ ರೂಪದಲ್ಲಿ ಹೋಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಈ ಫಲಿತಾಂಶದ ಮೇಲೆ ಸಮ್ಮತಿ ಇಲ್ಲದ ವಿದ್ಯಾರ್ಥಿಗಳಿಗೆ ಆಗಸ್ಟ್ 19 ರಿಂದ ಸೆ. 3 ರ ವರೆಗೆ ಪರೀಕ್ಷೆ ನಡೆಯಲಿದೆ. ಅದಕ್ಕೆ ಜುಲೈ 30 ರೊಳಗೆ ನೋಂದಾಯಿಸಿಕೊಳ್ಳಬಹುದು ಎಂದು ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.