ನವದೆಹಲಿ: 2021 ರ ಆಗಸ್ಟ್ 29 ರಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಹಾಗೂ ಹನುಮಗ್ರಾಹಿ ದೇಗುಲಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರಪತಿಗಳು ಲಕ್ನೋ ದಿಂದ ವಿಶೇಷ ರೈಲಿನ ಮುಖೇನ ಅಯೋಧ್ಯೆ ತಲುಪಲಿದ್ದಾರೆ. ಆಗಸ್ಟ್ 27 – 29 ರ ವರೆಗೆ ಉತ್ತರ ಪ್ರದೇಶದ ಕಾರ್ಯಕ್ರಮ ನಿಗದಿಯಾಗಿದೆ. ಆಗಸ್ಟ್ 27 ರಂದು ಅವರು ವಿಶೇಷ ವಿಮಾನದ ಮೂಲಕ ಗೋರಖ್ಪುರಕ್ಕೆ ತೆರಳಿ, ಅಲ್ಲಿ ಆಯುಷ್ ವಿಶ್ವವಿದ್ಯಾಲಯದ ಶಂಕುಸ್ಥಾಪನೆ, ಗುರು ಗೋರಕ್ ನಾಥ್ ವಿಶ್ವವಿದ್ಯಾಲಯದ ಆಸ್ಪತ್ರೆ ನಿರ್ಮಾಣ ಉದ್ಘಾಟಿಸಲಿದ್ದಾರೆ.
ಆ ಬಳಿಕ ಲಕ್ನೋಗೆ ತೆರಳಲಿರುವ ಅವರು 29 ರಂದು ಅಯೋಧ್ಯೆಯ ಶ್ರೀ ರಾಮಲಲ್ಲಾ, ಹನುಮಗ್ರಾಹಿ ದೇಗುಲಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಆಗಸ್ಟ್ 30 ರಂದು ನವದೆಹಲಿಗೆ ಮತ್ತೆ ಹಿಂದಿರುಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.