ನವದೆಹಲಿ: ದೇಶದಲ್ಲಿ ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿದ್ದು, ಕೊರೋನಾ ಪಾಸಿಟಿವಿಟಿ ದರ 5% ಗಿಂತ ಕಡಿಮೆ ಇರುವಲ್ಲಿ ಪ್ರಾಥಮಿಕ ಶಾಲೆಗಳನ್ನು ತೆರೆಯಬಹುದು ಎಂದು ಸರ್ಕಾರದ ಹಿರಿಯ ಅಧಿಕಾರಿಗಳು ಸಲಹೆ ನೀಡಿದ್ದಾರೆ.
ಆದರೆ ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿಗಳು ಕಡ್ಡಾಯವಾಗಿ ಕೊರೋನಾ ಒಂದು ಮತ್ತು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿರುವುದನ್ನು ಖಾತ್ರಿ ಪಡಿಸಿಕೊಳ್ಳುವಂತೆ ಐಸಿಎಂಆರ್ ಸೂಚಿಸಿದೆ. ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಕೊರೋನಾ ಸೋಂಕನ್ನು ಹೆಚ್ಚು ಪರಿಣಾಮಕಾರಿಯಾಗಿ ನಿಭಾಯಿಸಲು ಸಾಧ್ಯವಿರುವ ಹಿನ್ನೆಲೆಯಲ್ಲಿ ಸರ್ಕಾರದ ಅಧಿಕಾರಿಗಳು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಐಸಿಎಂಆರ್ ಪ್ರಧಾನ ನಿರ್ದೇಶಕ ಬಲರಾಮ ಭಾರ್ಗವ ಅವರು ಈ ಸಂಬಂಧ ಮಾತನಾಡಿದ್ದು, ವಯಸ್ಕರಿಗೆ ಹೋಲಿಸಿದರೆ ಮಕ್ಕಳಲ್ಲಿ ವೈರಾಣು ದೇಹಕ್ಕೆ ಸೇರುವ ಎಸಿಇ ರಿಸೆಪ್ಟರ್ ಜೀವಕೋಶಗಳು ಮಕ್ಕಳಲ್ಲಿ ಕಡಿಮೆ ಪ್ರಮಾಣದಲ್ಲಿರುತ್ತವೆ ಎಂದು ತಿಳಿಸಿದ್ದಾರೆ. ದೇಶದಲ್ಲಿ ಶಾಲೆಗಳನ್ನು ಪುನರಾರಂಭ ಮಾಡುವುದಾದರೆ ಪ್ರಾಥಮಿಕ ಶಾಲೆಗಳನ್ನು ಆರಂಭಿಸಬೇಕು. ಶಿಕ್ಷಕರು, ಬೋಧಕೇತರ ವರ್ಗ ಲಸಿಕೆ ಪಡೆದಿರುವುದು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.