ನವದೆಹಲಿ: ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಆಮ್ಲಜನಕ ಕೊರತೆಯ ಕಾರಣಕ್ಕೆ ಸಾವುಗಳು ಸಂಭವಿಸಿರುವುದರ ಬಗ್ಗೆ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ನಿರ್ಧಿಷ್ಟ ವರದಿ ನೀಡಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಕೋವಿಡ್ ಸೆಕೆಂಡ್ ವೇವ್ ಸಂದರ್ಭದಲ್ಲಿ ಆಮ್ಲಜನಕಕ್ಕೆ ಅಧಿಕ ಬೇಡಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೂ ಸಮಾನವಾಗಿ ಆಮ್ಲಜನಕ ವಿತರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೆಲಸ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಆರೋಗ್ಯ ವಿಚಾರ ರಾಜ್ಯಗಳಿಗೆ ಸಂಬಂಧಿಸಿದಂತೆ ಇರುವುದಾಗಿದ್ದು, ಕೊರೋನಾ ಪರಿಸ್ಥಿತಿ, ಸಾವುಗಳ ಬಗೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ನಿರಂತರವಾಗಿ ಕೇಂದ್ರ ಸರ್ಕಾರಕ್ಕೆ ವರದಿ ನೀಡುತ್ತಿರುವುದಾಗಿ ತಿಳಿಸಿದೆ. ಇದಕ್ಕಾಗಿ ವಿವರವಾದ ಮಾರ್ಗಸಚಿಗಳನ್ನು ಹೊರಡಿಸಲಾಗಿದೆ ಎಂದು ಕೇಂದ್ರ ರಾಜ್ಯಸಭೆಗೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.