ಟೊಕಿಯೋ: ಕೊರೋನಾ ಸೋಂಕು ನಿಯಂತ್ರಣ ಮಾಡುವಲ್ಲಿ ಜಗತ್ತು ಸಂಕಷ್ಟ ಅನುಭವಿಸುತ್ತಿದ್ದ ಹಿನ್ನೆಲೆಯಲ್ಲಿ 2020 ರ ಸಂದರ್ಭದಲ್ಲಿ ಟೊಕಿಯೋ ಒಲಿಂಪಿಕ್ಸ್ ಅನ್ನು ಮುಂದೂಡಲಾಗಿತ್ತು ಎಂದು ವಿಶ್ವ ಆರೋಗ್ಯ ಸಂಸ್ಥೆ ಅಧ್ಯಕ್ಷ ಟೆಡ್ರೋಸ್ ಅಧಾನಮ್ ತಿಳಿಸಿದ್ದಾರೆ.
ಟೊಕಿಯೋದಲ್ಲಿ ನಡೆದ ಅಂತರಾಷ್ಟ್ರೀಯ ಒಲಿಂಪಿಕ್ ಸಮಿತಿ ಅಧಿವೇಶನದಲ್ಲಿ ಮಾತನಾಡಿದ ಅವರು, ಕೊರೋನಾ ಸಾಂಕ್ರಾಮಿಕದಿಂದ ಬಳಲುತ್ತಿರುವ ಪ್ರಪಂಚಕ್ಕೆ ಈ ಒಲಿಂಪಿಕ್ಸ್ ಕ್ರೀಡಾಕೂಟ ಆಶಾವಾದದ ಸಂದೇಶವಾಗಲಿ ಎಂದು ತಿಳಿಸಿದ್ದಾರೆ.
ಕೊರೋನಾ ಸೋಂಕಿನಿಂದ ಪ್ರಪಂಚದಾದ್ಯಂತ ನಾಲ್ಕು ಮಿಲಿಯನ್ಗಿಂತಲೂ ಅಧಿಕ ಜನರು ಮೃತಪಟ್ಟಿದ್ದಾರೆ. ಸೋಂಕು ಇನ್ನೂ ನಿಯಂತ್ರಣವಾಗಿಲ್ಲ. ಇದು ನಮ್ಮೆಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದೆ ಎಂದು ತಿಳಿಸಿದ್ದಾರೆ. ಹಾಗೆಯೇ ಈ ಒಲಿಂಪಿಕ್ಸ್ ಕ್ರೀಡಾಕೂಟ ಜಗತ್ತನ್ನು ಒಗ್ಗೂಡಿಸುವ ಕ್ಷಣವಾಗಿರಲಿ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.