ಹೈದರಾಬಾದ್: ನಗರಕ್ಕೆ ಹತ್ತಿರವಿರುವ ಒಂದು ಪ್ರದೇಶದಲ್ಲಿ ಡೇಟಾ ಸೆಂಟರ್ ಆರಂಭಿಸುವ ಉದ್ದೇಶದಿಂದ ಮೈಕ್ರೋಸಾಫ್ಟ್ ಸಂಸ್ಥೆಯು ತೆಲಂಗಾಣ ರಾಜ್ಯ ಸರ್ಕಾರದ ಜೊತೆಗೆ 15 ಸಾವಿರ ಕೋಟಿ ರೂ. ಹೂಡಿಕೆ ಮಾಡುತ್ತಿದೆ. ಈ ಯೋಜನೆ ಅಂತಿಮ ಹಂತದಲ್ಲಿದೆ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.
ಮಾಹಿತಿ ತಂತ್ರಜ್ಞಾನ ವಿಚಾರಕ್ಕೆ ಸಂಬಂಧಿಸಿದಂತೆ ಮೈಕ್ರೋಸಾಫ್ಟ್ ಈಗಾಗಲೇ ಹಲವು ಪ್ರಮುಖ ಹೂಡಿಕೆಗಳಿಗೆ ಸಾಕ್ಷಿಯಾಗಿದೆ. ಅದರಂತೆ ಮೈಕ್ರೋಸಾಫ್ಟ್ ಸಹ ಹೈದರಾಬಾದ್ನಲ್ಲಿ ತನ್ನ ದತ್ತಾಂಶ ಕೇಂದ್ರವನ್ನು ಸ್ಥಾಪಿಸಲು ಮುಂದಾಗಿದೆ. ಈ ಬಗ್ಗೆ ಶೀಘ್ರದಲ್ಲೇ ಸಂಸ್ಥೆ ಅಧಿಕೃತ ಪ್ರಕಟಣೆ ನೀಡುವ ಸಾಧ್ಯತೆ ಇದೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.
ದೇಶದಲ್ಲಿ ಕ್ಲೌಡ್ ಡೇಟಾ ಕೇಂದ್ರಗಳನ್ನು ಆರಂಭಿಸುವ ಬಗ್ಗೆ 2019 ರಲ್ಲಿ ಮೈಕ್ರೋಸಾಫ್ಟ್ ಸಂಸ್ಥೆ ರಿಲಯನ್ಸ್ ಜಿಯೋ ಜೊತೆಗೆ ಒಪ್ಪಂದ ಮಾಡಿಕೊಂಡಿತ್ತು. ಇದು ಸಣ್ಣ ಉದ್ಯಮಗಳ ಅಭಿವೃದ್ಧಿಗೆ ಪೂರಕವಾಗಿರಲಿದೆ ಎಂದು ಸಂಸ್ಥೆ ಹೇಳಿದೆ. ಈಗಾಗಲೇ ಮೈಕ್ರೋಸಾಫ್ಟ್ ಜೊತೆಗೆ ಜಾಗತಿಕ ದೈತ್ಯ ಸಂಸ್ಥೆಗಳಾದ ಅಮೆಜಾನ್ ವೆಬ್ ಸರ್ವೀಸಸ್, ಗೂಗಲ್ ಸಹ ಭಾರತದಲ್ಲಿ ದತ್ತಾಂಶ ಕ್ಷೇತ್ರದಲ್ಲಿ ತಮ್ಮನ್ನು ತಾವು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕಾರ್ಯತತ್ಪರವಾಗಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.