ನವದೆಹಲಿ: ಆದಾಯ ಇಲಾಖೆಗೆ ಸಂಬಂಧಿಸಿದಂತೆ ಹೊಸದಾಗಿ ಆರಂಭ ಮಾಡಲಾಗಿರುವ ವೆಬ್ಸೈಟ್ ತಾಂತ್ರಿಕ ಸಮಸ್ಯೆ ಎದುರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ತಡವಾಗಿ ತೆರಿಗೆ ಪಾವತಿಸುವುದಕ್ಕೆ ವಿಧಿಸುವ ದಂಡವನ್ನು ಮನ್ನಾ ಮಾಡುವ ಬಗ್ಗೆ ಚಿಂತನೆ ನಡೆಸಿದೆ.
ವೆಬ್ಸೈಟ್ನಲ್ಲಿನ ತಾಂತ್ರಿಕ ದೋಷಗಳನ್ನು ಶೀಘ್ರ ಪರಿಹರಿಸುವಂತೆ ಇನ್ಫೋಸಿಸ್ ಸಂಸ್ಥೆಗೂ ಅಧಿಕಾರಿಗಳು ಸೂಚಿಸಿದ್ದಾರೆ. ಈ ಸಂಬಂಧ ಕಳೆದ ತಿಂಗಳು ನಡೆದ ಸಭೆಯಲ್ಲಿ ಈ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ಇನ್ಫೋಸಿಸ್ ಸಂಸ್ಥೆ ಸಮಯಾವಕಾಶವನ್ನೂ ಕೇಳಿತ್ತು. ಆದರೆ ನಿಗದಿತ ಸಮಯದಲ್ಲಿ ಈ ಸಮಸ್ಯೆಗಳು ಪೂರ್ಣ ಪ್ರಮಾಣದಲ್ಲಿ ಬಗೆಹರಿಯದ ಹಿನ್ನೆಲೆಯಲ್ಲಿ ಕಾಗತ ರಹಿತ ತೆರಿಗೆ ಪಾವತಿಸುವಲ್ಲಿ ತಡವಾದರೆ, ಅದಕ್ಕೆ ವಿಧಿಸುವ ದಂಡವನ್ನು ಮನ್ನಾ ಮಾಡುವ ಬಗ್ಗೆ ಯೋಚಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ತಾಂತ್ರಿಕ ದೋಷಗಳನ್ನು ನಿವಾರಿಸುವ ತಂಡದ ಜೊತೆ ಆದಾಯ ತೆರಿಗೆ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದಾರೆ. ಈ ತಿಂಗಳ ಅಂತ್ಯದಲ್ಲಿ ಈ ಸಮಸ್ಯೆ ಬಗೆಹರಿಯದಿದ್ದರೆ ದಂಡ ವಿನಾಯಿತಿ ಮತ್ತು ತೆರಿಗೆ ಪಾವತಿ ಅವಧಿ ವಿಸ್ತರಣೆಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.