ನವದೆಹಲಿ: ಕೊರೋನಾ ಲಸಿಕೆ ಲಭ್ಯತೆಗೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಪ್ರಸ್ತುತ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ, ಖಾಸಗಿ ಆಸ್ಪತ್ರೆಗಳಲ್ಲಿ ಸುಮಾರು 3.20 ಕೋಟಿಗಳಷ್ಟು ಕೋವಿಡ್ -19 ಲಸಿಕೆಗಳು ಲಭ್ಯವಿವೆ ಎಂದು ತಿಳಿಸಿದೆ.
ಎಲ್ಲಾ ಮೂಲಗಳ ಮಾಹಿತಿಯನ್ನು ಪರಿಶೀಲಿಸಿ, ಕೇಂದ್ರ ಸರ್ಕಾರದಿಂದ ಈ ವರೆಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು 43,79,78,900 ಡೋಸ್ ಲಸಿಕೆಗಳನ್ನು ಸ್ವೀಕರಿಸಿದೆ. ಇನ್ನೂ 7,00,000 ಡೋಸ್ಗಳು ವಿತರಣೆಯ ಹಾದಿಯಲ್ಲಿದೆ ಎಂದು ಹೇಳಿದೆ.
ವ್ಯರ್ಥವಾದ ಲಸಿಕೆಗಳು ಸೇರಿದಂತೆ ಈ ವರೆಗೆ ಒಟ್ಟು 40,59,77,410 ಡೋಸ್ ಲಸಿಕೆಗಳು ಬಳಕೆಯಾಗಿವೆ. ಸುಮಾರು 3,20,01,490 ಬಳಕೆಯಾಗದ ಕೊರೋನಾ ಲಸಿಕೆಗಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು, ಖಾಸಗಿ ಆಸ್ಪತ್ರೆಗಳ ಬಳಿ ಇನ್ನೂ ಲಭ್ಯವಿದೆ ಎಂದು ಸಚಿವಾಲಯ ತಿಳಿಸಿದೆ. ಹಾಗೆಯೇ ವ್ಯಾಕ್ಸಿನೇಶನ್ ವ್ಯಾಪ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಸಚಿವಾಲಯ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.