ಬೆಂಗಳೂರು: ಕೊರೊನಾ ಸಂದರ್ಭದಲ್ಲಿ ಸಮಾಜದ ಸ್ವಾಸ್ಥ್ಯ ಕಾಪಾಡಲು ನಿಸ್ವಾರ್ಥ ಸೇವೆ ಸಲ್ಲಿಸುತ್ತಾ ಹುತಾತ್ಮರಾದ ಕೊರೊನಾ ಯೋಧರ ಜ್ಞಾಪಕಾರ್ಥವಾಗಿ ನಿರ್ಮಿಸಲು ಉದ್ದೇಶಿಸಿರುವ ಸ್ಮಾರಕ ಕುರಿತಂತೆ ಇಂದು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.
ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಸಭೆ ನಡೆಸಿದ್ದು, ಕೊರೊನಾ ಯೋಧರ ತ್ಯಾಗ, ಸೇವೆ ಮುಂದಿನ ಪೀಳಿಗೆಗಳಿಗೆ ಮಾದರಿಯಾಗಲಿದ್ದು, ಇಡೀ ಸಮಾಜ ಅವರಿಗೆ ಕೃತಜ್ಞವಾಗಿದೆ ಎಂದು ತಿಳಿಸಿದರು.
ಕೊರೋನಾ ಸೋಂಕಿನ ಸಂದರ್ಭದಲ್ಲಿ ರಾಜ್ಯದ ವೈದ್ಯಕೀಯ ಸಿಬ್ಬಂದಿ ತಮ್ಮ ಜೀವನವನ್ನೇ ಪಣಕ್ಕಿಟ್ಟು ದುಡಿದಿದ್ದಾರೆ. ಕೊರೋನಾ ಕರ್ತವ್ಯ ಸಂದರ್ಭದಲ್ಲಿ ಜೀವ ಕಳೆದುಕೊಂಡವರು ಇದ್ದು, ಅವರ ಸ್ಮರಣಾರ್ಥ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಅಂತಹ ಕೊರೋನಾ ಯೋಧರ ತ್ಯಾಗವನ್ನು ಈ ಸಂದರ್ಭದಲ್ಲಿ ಸಚಿವರು ಸ್ಮರಿಸಿದ್ದಾರೆ.
ಕೊರೊನಾ ಸಂದರ್ಭದಲ್ಲಿ ಸಮಾಜದ ಸ್ವಾಸ್ಥ್ಯ ಕಾಪಾಡಲು ನಿಸ್ವಾರ್ಥ ಸೇವೆ ಸಲ್ಲಿಸುತ್ತಾ ಹುತಾತ್ಮರಾದ ಕೊರೊನಾ ಯೋಧರ ಜ್ಞಾಪಕಾರ್ಥವಾಗಿ ನಿರ್ಮಿಸಲು ಉದ್ದೇಶಿಸಿರುವ ಸ್ಮಾರಕ ಕುರಿತಂತೆ ಇಂದು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು. ಕೊರೊನಾ ಯೋಧರ ತ್ಯಾಗ, ಸೇವೆ ಮುಂದಿನ ಪೀಳಿಗೆಗಳಿಗೆ ಮಾದರಿಯಾಗಲಿದ್ದು, ಇಡೀ ಸಮಾಜ ಅವರಿಗೆ ಕೃತಜ್ಞವಾಗಿದೆ. pic.twitter.com/kkGUFMRzDi
— Dr Sudhakar K (@mla_sudhakar) July 23, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.