ಬೆಂಗಳೂರು: ರಾಜ್ಯದ ಅನೇಕ ಭಾಗಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಪ್ರಕೃತಿ ವಿಕೋಪಗಳು ಸಂಭವಿಸುವ ಸಾಧ್ಯತೆ ಇದ್ದು, ಈ ನಿಟ್ಟಿನಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿದ್ದು, ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಜನ, ಜಾನುವಾರುಗಳ ರಕ್ಷಣೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.
ಹಾಗೆಯೇ ಬೆಳಗಾವಿ ಜಿಲ್ಲೆ ಸೇರಿದಂತೆ ಇತರ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೂ ಸಿಎಂ ಮಾತುಕತೆ ನಡೆಸಿ, ನದಿ ಪಾತ್ರದ ಹಳ್ಳಿಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಸೂಚಿಸಿದ್ದಾರೆ.
ರಾಜ್ಯದ ಅನೇಕ ಭಾಗಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನಲೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರುಗಳು ಮತ್ತು ಶಾಸಕರು ತಮ್ಮ ತಮ್ಮ ಜಿಲ್ಲೆ ಹಾಗೂ ಕ್ಷೇತ್ರಗಳಲ್ಲಿ ಉಪಸ್ಥಿತರಿದ್ದು ಜನರಿಗೆ ನೆರವಾಗಬೇಕು, ರಕ್ಷಣೆ ಮತ್ತು ಪರಿಹಾರ ಕಾರ್ಯಗಳ ಮೇಲ್ವಿಚಾರಣೆ ನಡೆಸಬೇಕು ಎಂದು ಸೂಚಿಸುತ್ತೇನೆ. (1/2)
— B.S. Yediyurappa (@BSYBJP) July 23, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.