ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಪಾಸಿಟಿವಿಟಿ ದರ ಕಡಿಮೆಯಾಗುತ್ತಿರುವ ಬೆನ್ನಲ್ಲೇ, ರಾಜ್ಯ ಸರ್ಕಾರ ದೇವಸ್ಥಾನ, ಮಸೀದಿ, ಚರ್ಚ್ ಸೇರಿದಂತೆ ಇನ್ನಿತರ ಧಾರ್ಮಿಕ ಕೇಂದ್ರಗಳನ್ನು ತೆರೆಯುವುದು, ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವುದಕ್ಕೆ ಸರ್ಕಾರ ಅನುಮತಿ ನೀಡಿದೆ.
ಈ ಬಗ್ಗೆ ಇಂದು ಅಧಿಕೃತ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಹಾಗೆಯೇ ಜುಲೈ 25 ರಿಂದ ತೊಡಗಿದಂತೆ ಈ ಆದೇಶ ಜಾರಿಯಾಗಲರುವುದಾಗಿಯೂ ಸರ್ಕಾರ ತಿಳಿಸಿದೆ.
ಕೊರೋನಾ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ಧಾರ್ಮಿಕ ಕಾರ್ಯಕ್ರಮಗಳನ್ನು, ದೇವಾಲಯಗಳಲ್ಲಿ, ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲಾ ಸೇವೆಗಳನ್ನು ನಡೆಸಬಹುದು ಎಂದು ಸರ್ಕಾರ ತಿಳಿಸಿದೆ. ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಆದರೆ ಜಾತ್ರೆ, ಮೆರವಣಿಗೆ ಮೊದಲಾದವುಗಳನ್ನು ನಡೆಸುವುದಕ್ಕೆ ಅವಕಾಶ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಹಾಗೆಯೇ ಅಮ್ಯೂಸ್ಮೆಂಟ್ ಪಾರ್ಕ್ ಸೇರಿದಂತೆ, ಇದೇ ರೀತಿಯ ಇತರ ಸ್ಥಳಗಳನ್ನು ತೆರೆಯುವುದಕ್ಕೂ ಅನುಮತಿ ನೀಡಲಾಗಿದೆ. ಕೊರೋನಾ ಮಾರ್ಗಸೂಚಿಗಳನ್ನು ಮಾತ್ರ ಕಡ್ಡಾಯವಾಗಿ ಪಾಲಿಸುವಂತೆ ಸರ್ಕಾರ ಹೇಳಿದೆ. ವಾಟರ್ ಸ್ಪೋರ್ಟ್ಸ್ಗಳಿಗೆ ಅವಕಾಶ ಇಲ್ಲ ಎಂಬುದಾಗಿಯೂ ಪ್ರಕಟಣೆಯಲ್ಲಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.