ಟೊಕಿಯೋ: ಒಲಿಂಪಿಕ್ಸ್ನಲ್ಲಿ ದೇಶಕ್ಕೆ ಮೊದಲ ಪದಕ ತಂದುಕೊಟ್ಟ ವೈಟ್ಲಿಫ್ಟರ್ ಮೀರಾಬಾಯ್ ಚಾನು ಅವರು ತಮ್ಮ ಈ ಸಾಧನೆಯನ್ನು ದೇಶಕ್ಕೆ ಸಮರ್ಪಣೆ ಮಾಡುವುದಾಗಿ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಚಾನು, ನನ್ನ ಕನಸು ನನಸಾಗಿದೆ. ಈ ಬೆಳ್ಳಿ ಪದಕವನ್ನು ನನ್ನ ದೇಶಕ್ಕೆ ಸಮರ್ಪಣೆ ಮಾಡಲು ಇಷ್ಟಪಡುತ್ತೇನೆ ಎಂದು ತಿಳಿಸಿದ್ದಾರೆ. ಹಾಗೆಯೇ ನನ್ನ ಈ ಸಾಧನೆಗೆ ಬೆನ್ನು ತಟ್ಟಿ ಪ್ರೋತ್ಸಾಹ ನೀಡಿದ ಎಲ್ಲರಿಗೂ ಧನ್ಯವಾದ. ನನ್ನ ಈ ಪಯಣದಲ್ಲಿ ಜೊತೆಯಾಗಿ ನಿಂತ, ನನ್ನ ಗೆಲುವಿಗಾಗಿ ಪ್ರಾರ್ಥಿಸಿದ ಭಾಯತೀಯರಿಗೆ, ನನಗಾಗಿ ಸಾಕಷ್ಟು ತ್ಯಾಗ ಮಾಡಿ ನನ್ನಲ್ಲಿ ನಂಬಿಕೆ ಇರಿಸಿಕೊಂಡಿರುವ ನನ್ನ ತಾಯಿಗೆ ಧನ್ಯವಾದಗಳು ಎಂದಿದ್ದಾರೆ.
ಇವರು ಒಲಿಂಪಿಕ್ಸ್ನಲ್ಲಿ ಭಾರ ಎತ್ತುವ ಸ್ಪರ್ಧೆಯಲ್ಲಿ 49 ಕೆಜಿಗಳನ್ನು ಎತ್ತಿ ಬೆಳ್ಳಿಯ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಹಾಗೆಯೇ ಈ ಒಲಿಂಪಿಕ್ಸ್ನಲ್ಲಿ ಇದು ದೇಶಕ್ಕೆ ಸಿಕ್ಕ ಮೊದಲ ಪದಕವಾಗಿದೆ.
I am really happy on winning silver medal in #Tokyo2020 for my country 🇮🇳 pic.twitter.com/gPtdhpA28z
— Saikhom Mirabai Chanu (@mirabai_chanu) July 24, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.