ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಇರುವಕ್ಕಿಯಲ್ಲಿ ಸ್ಥಾಪಿಸಲಾದ ಕೃಷಿ ಮತ್ತು ತೋಟಗಾರಿಕಾ ವಿವಿಗೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿವಿ ಎಂದು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ವರ್ಚುವಲ್ ಕಾರ್ಯಕ್ರಮದ ಮೂಲಕ ಜಿಲ್ಲೆಯ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಿ, ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಳೆದ ಎರಡು ವರ್ಷಗಳಲ್ಲಿ ಶಿವಮೊಗ್ಗದ ಅಭಿವೃದ್ಧಿಗಾಗಿ ಗರಿಷ್ಠ ಪ್ರಯತ್ನ ಮಾಡಲಾಗಿದೆ. ಜಿಲ್ಲೆಯ ಜನರ ಋಣ ತೀರಿಸುವ ಪ್ರಾಮಾಣಿಕ ಪ್ರಯತ್ನ ನನ್ನದಾಗಿದೆ. ಕಳೆದ ಎರಡು ವರ್ಷದಲ್ಲಿ ಸಮರೋಪಾದಿಯಲ್ಲಿ ಜಿಲ್ಲೆಯ ರೈತರ ಹೊಲಗಳಿಗೆ ನೀರಾವರಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗಿದೆ. ಏತ ನೀರಾವರಿಗಾಗಿ ದಾಖಲೆ ಪ್ರಮಾಣದಲ್ಲಿ ಅನುದಾನಗಳನ್ನು ಒದಗಿಸಲಾಗಿದೆ. ನೀರಾವರಿ ಯೋಜನೆಗಳು ಭವಿಷ್ಯದಲ್ಲಿ ರೈತರ ಆರ್ಥಿಕ ಚಿತ್ರಣವನ್ನು ಬದಲಾಯಿಸಲಿದೆ ಎಂದು ಅವರು ಹೇಳಿದ್ದಾರೆ.
ಸೋಗಾನೆಯಲ್ಲಿ ವಿಮಾನ ನಿಲ್ದಾಣ, ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು, ಜೋಗ ಜಲಪಾತವನ್ನು ರಮಣೀಯವಾಗಿಸಲು 185 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಮೊದಲಾದ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ 1070 ಕೋಟಿ ರೂ. ವೆಚ್ಚದ ವಿವಿಧ ಯೋಜನೆಗಳ ಕಾಮಗಾರಿ ಉದ್ಘಾಟನೆ ಮತ್ತು 560 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಮುಖ್ಯಮಂತ್ರಿ @BSYBJP ರವರು ಇಂದು ಗೃಹಕಚೇರಿ 'ಕೃಷ್ಣಾ'ದಲ್ಲಿ ವರ್ಚುವಲ್ ಹೋಸ್ಟಿಂಗ್ ಮೂಲಕ ಶಿವಮೊಗ್ಗ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಿದರು.
ಉಪಮುಖ್ಯಮಂತ್ರಿ @LaxmanSavadi, ಸಚಿವರಾದ @bcpatilkourava, @BABasavaraja, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. (1/2) pic.twitter.com/UXpbh5JPiu
— CM of Karnataka (@CMofKarnataka) July 24, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.