ಹಂಗೇರಿ: ವಿಶ್ವ ಕುಸ್ತಿ ಚಾಂಪಿಯನ್ ಶಿಪ್ನಲ್ಲಿ ಭಾರತದ ಕುಸ್ತಿ ಪಟು ಪ್ರಿಯಾ ಮಲಿಕ್ ಅವರು ವಿಜೇತರಾಗಿ, ಬಂಗಾರದ ಪದಕ ಪಡೆಯುವ ಮೂಲಕ ದೇಶದ ಹಿರಿಮೆಯನ್ನು ಹೆಚ್ಚಿಸಿದ್ದಾರೆ.
ಬುಡಾಫೆಸ್ಟ್ನಲ್ಲಿ ನಡೆದ ವಿಶ್ವ ಕುಸ್ತಿ ಚಾಂಪಿಯನ್ ಶಿಪ್ನ 73 ಕೆಜಿ ವಿಭಾಗದಲ್ಲಿ ಪ್ರಿಯಾ ಮಲಿಕ್ ಈ ಸಾಧನೆ ಮೆರೆದಿದ್ದಾರೆ.
ಪ್ರಿಯಾ ಮಲಿಕ್ ಅವರ ಈ ಸಾಧನೆಗೆ ಪ್ರಶಂಸೆಗಳ ಸುರಿಮಳೆಯೇ ಹರಿದು ಬರುತ್ತಿದೆ. ನಿನ್ನೆಯಷ್ಟೇ ಟೊಕಿಯೋ ಒಲಿಂಪಿಕ್ಸ್ನಲ್ಲಿ ಭಾರತದ ಮೀರಾಬಾಯ್ ಚಾನು ಅವರು ವೈಯ್ಟ್ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆಯುವ ಮೂಲಕ ದೇಶದ ಹಿರಿಮೆಯನ್ನು ಎತ್ತಿ ಹಿಡಿದಿದ್ದರು. ಇದೀಗ ವಿಶ್ವ ಕುಸ್ತಿ ಚಾಂಪಿಯನ್ ಶಿಪ್ನಲ್ಲಿ ಪ್ರಿಯಾ ಮಲ್ಲಿಕ್ ಗೋಲ್ಡ್ ಮೆಡಲ್ ಪಡೆದು ಭಾರತದ ಬಂಗಾರದ ಹುಡುಗಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.